ಬೆಳಗಾವಿ : ಶಿವಾಜಿ ಮಹಾರಾಜರ ಮೂರ್ತಿ ಪೂರ್ಣವಾಗದೆ ಬಿಜೆಪಿಗರು ಅದನ್ನು ಉದ್ಘಾಟನೆ ಮೂಲಕ ಶಿವಾಜಿ ಮಹಾರಾಜರ ಭಕ್ತರಿಗೆ ಅಪಮಾನ ಮಾಡಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.
ಸಿಎಂ ಐದು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ: ಅವರು ಬೆಳಗಾವಿ ರಾಜಹಂಸಗಡದಲ್ಲಿ ನಿರ್ಮಾಣವಾಗಿರುವ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಕಾಂಗ್ರೆಸ್ ಮುಖಂಡರ ಮುಂದಾಳತ್ವದಲ್ಲಿ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಕಳೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಏನು ಹೇಳಬೇಕು ಅದನ್ನು ಹೇಳಿದ್ದೇನೆ. ಹೆಚ್ಚಿಗೆ ನಾನು ಏನೂ ಮಾತನಾಡುವುದಿಲ್ಲ. ರಾಜಹಂಸಗಡದ ಸ್ಥಳಕ್ಕೆ ಸಿಎಂ ಐದು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ :ಬಿಜೆಪಿಗೆ ಸುಳ್ಳು ಮನೆ ದೇವರಾದರೆ, ಭ್ರಷ್ಟಾಚಾರ ಪಕ್ಷದ ಅಧಿಕೃತ ಕಾರ್ಯಕ್ರಮ: ಬಿ.ಕೆ.ಹರಿಪ್ರಸಾದ್ ಲೇವಡಿ
ಬಿಜೆಪಿ ನಾಯಕರು ಶಿವಾಜಿ ಭಕ್ತರಿಗೆ ಅವಮಾನ ಮಾಡಿದ್ದಾರೆ ಎಂದ ಶಾಸಕಿ : ನಾನು ಅವರ ಕಾರ್ಯವನ್ನು ಸ್ವಾಗತಿಸುತ್ತೇನೆ. ನಾನೇನು ಕಾಮಾಲೆ ಕಣ್ಣಿನಿಂದ ಎಲ್ಲವನ್ನೂ ನೋಡುವುದಿಲ್ಲ ಎಂದು ಪರೋಕ್ಷವಾಗಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರಿಗೆ ಟಾಂಗ್ ನೀಡಿದ್ರು. ಆದರೆ ನಿರ್ಮಾಣ ಹಂತದಲ್ಲಿ ಇರುವಾಗಲೇ ಬಿಜೆಪಿ ನಾಯಕರು ಉದ್ಘಾಟನೆ ಮಾಡಿ ಶಿವಾಜಿ ಭಕ್ತರಿಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.