ಬೆಳಗಾವಿ:ನಗರದ ಸಂಭಾಜೀ ವೃತ್ತದಲ್ಲಿ ಶಿವಸೇನೆ, ಎಂಇಎಸ್ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸುತ್ತಿದ್ದಾರೆ. ಕರವೇ ಕಾರ್ಯಕರ್ತರ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸುವಂತೆ ಪಟ್ಟು ಹಿಡಿದಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಡಿಸಿಪಿ ವಿಕ್ರಂ ಆಮ್ಟೆ ಪ್ರತಿಭಟನಾಕಾರರ ಮನವೊಲಿಕೆಗೆ ಮುಂದಾದರು. ಈ ವೇಳೆ ಕರವೇ ಕಾರ್ಯಕರ್ತರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸುವಂತೆ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರು ಪಟ್ಟುಹಿಡಿದರು. ಈ ವೇಳೆ ಪೊಲೀಸರು ಹಾಗೂ ಎಂಇಎಸ್, ಶಿವಸೇನೆ ನಡುವೆ ಮಾತಿನ ಚಕಮಕಿ ನಡೆಯಿತು.