ಚಿಕ್ಕೋಡಿ: ಸದಾ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೇ ಬಂದಿರುವ ಶಿವಸೇನೆ ಸಂಘಟನೆ ಇದೀಗ ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ವಾಹನಗಳ ತಪಾಸಣೆ ನಿಲ್ಲಿಸುವಂತೆ ಹೊಸ ವರಸೆ ಶುರು ಮಾಡಿದ್ದಾರೆ.
ಮಹಾರಾಷ್ಟ್ರದ ಕೆಲ ಹಳ್ಳಿಗಳಿಗೆ ಕರ್ನಾಟಕದ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾದು ಹೋಗಬೇಕು. ಅಂತರವನ್ನು ತಡೆದು ಆರ್‌ಟಿ-ಪಿಸಿಆರ್ (RT-PCR) ವರದಿ ಕೇಳಬಾರದು ಎಂದು ತಗಾದೆ ತೆಗೆದಿರುವ ಶಿವಸೇನೆ ಕಾರ್ಯಕರ್ತರು, ಮಹಾರಾಷ್ಟ್ರ- ಕರ್ನಾಟಕದ ಗಡಿಯಲ್ಲಿ ನಿಂತು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಸೇನೆ ಕಾರ್ಯಕರ್ತರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕ ಪೊಲೀಸರು, ಸರ್ಕಾರದ ಆದೇಶ ಪಾಲನೆ ಮಾಡುವುದು ನಮ್ಮ ಕರ್ತವ್ಯ, ನಾವು ಅದನ್ನು ಮಾಡುತ್ತಿದ್ದೇವೆ ಎಂದಿದ್ದಾರೆ. ಸ್ಥಳದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.