ಗೋಕಾಕ: ಸಹೋದರರ ಸಮರದಿಂದ ರಂಗೇರಿರುವಗೋಕಾಕ್ ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ನವೆಂಬರ್ 29ರಂದು ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
29ರಂದು ಗೋಕಾಕ್ನಲ್ಲಿ ಸಿದ್ದರಾಮಯ್ಯ ಪ್ರಚಾರ - ಗೋಕಾಕ್ ಉಪಚುನಾವಣೆ ಸುದ್ದಿ
ಗೋಕಾಕ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರ ಪ್ರಚಾರ ಮಾಡಲು ವಿಪಕ್ಷ ನಾಯಕ ಸಿದ್ದರಾಮಯ್ಯನವರು ನವೆಂಬರ್ 29ರಂದು ಆಗಮಿಸಲಿದ್ದಾರೆ ಎಂದು ಮಾಜಿ ಸತೀಶ್ ಜಾರಕಿಹೊಳಿ ಹೇಳಿದರು.
ಮಾಜಿ ಸಚಿವ ಸತೀಶ್ ಜಾರಕಿಗಹೊಳಿ
ಗೋಕಾಕ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ13 ಜನ ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದ ರಮೇಶ್ ಹೇಳಿಕೆಗೆ ತಿರುಗೇಟು ನೀಡಿದರು. ಶಾಸಕರು ಅಂಗಡಿಯಲ್ಲಿ ಸಿಗುವ ಬಿಸ್ಕಿಟ್ ಅಲ್ಲ, ರಮೇಶ್ ಬಾಯಿಗೆ ಬಂದಂತೆ ಮಾತನಾಡುತ್ತಾನೆ ಎಂದು ಸಹೋದರ ರಮೇಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಯಾರ ಭಾಷಣ ಕೇಳಿಯು ಮತದಾರರು ಆಯ್ಕೆ ಮಾಡುವುದಿಲ್ಲ. ಅವರಿಗೆ ಹಲವಾರು ಸಮಸ್ಯೆಗಳಿವೆ. ಈಗಾಗಲೇ ಮತದಾರರು ತಮ್ಮ ನಾಯಕರನ್ನು ಗುರುತಿಸಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.