ಬೆಳಗಾವಿ:ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸೆ.24 ಕ್ಕೆ ರಾಜ್ಯ ಹಾಗೂ ಕೇಂದ್ರದ ವಿರುದ್ಧ ಮಾಡಬೇಕಾಗಿದ್ದ ಬೃಹತ್ ಪ್ರತಿಭಟನೆಗೆ ಚುನಾವಣೆ ನೀತಿ ಸಂಹಿತೆಗೆ ಅಡ್ಡಿಯಾಗಿದೆ.
ಜಿಲ್ಲಾಧಿಕಾರಿ ಡಾ.ಬಿ.ಎಸ್.ಬೊಮ್ಮನಹಳ್ಳಿ ಸೆಪ್ಟೆಂಬರ್ 24 ರಂದು ಕಾಂಗ್ರೆಸ್ ಪಕ್ಷ, ಪ್ರವಾಹ ಪೀಡಿತ ನಿರಾಶ್ರಿತರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪರಿಹಾರ ವಿಳಂಬ ಮಾಡುತ್ತಿವೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಬೇಕಿದ್ದ ಬೃಹತ್ ಪ್ರತಿಭಟನೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮುಖಾಂತರ ಚುನಾವಣೆಗೆ ಅಣಿಯಾಗಲು ಹೊರಟಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿರಾಸೆಯಾಗಿದೆ. ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರದ ಕೈ ಶಾಸಕರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಪರಿಣಾಮ ಸಮ್ಮಿಶ್ರ ಸರ್ಕಾರ ಪತವಾಗಿತ್ತು. ಮಾಜಿ ಕೈ ಶಾಸಕರ ವಿರುದ್ಧ ತೊಡೆ ತಟ್ಟಲು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದ ಕಾಂಗ್ರೆಸ್ ಗೆ ಜಿಲ್ಲಾಡಳಿತ ಅವಕಾಶ ನಿರಾಕರಿಸಿದೆ.
ಉಪಚುನಾವಣೆ ಹಿನ್ನಲೆ ಜಿಲ್ಲೆಯಾದ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಕೇಂದ್ರ ಚುನಾವಣಾ ಆಯೋಗ ನೀಡಿರುವ ಸುತ್ತೋಲೆಯಂತೆ ಜಿಲ್ಲೆಯಾದ್ಯಂತ ಚುನಾವಣಾ ತಯಾರಿ ನಡೆಯಲಿದೆ. ಜೊತೆಗೆ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಹಿಂಪಡೆಯುವಂತೆ ಕಾಂಗ್ರೆಸ್ ಪಕ್ಷಕ್ಕೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.