ಕರ್ನಾಟಕ

karnataka

ETV Bharat / state

ಡಾ.ಅಂಬೇಡ್ಕರ್​​ಗೆ ಊಟೋಪಚಾರ ಮಾಡಿದ್ದ ಬೆಳಗಾವಿ ಅಜ್ಜಿ ನಿಧನ - Ambedkar followers siddavva methri death news

1939ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಿ, ಊಟೋಪಚಾರದ ವ್ಯವಸ್ಥೆ ಮಾಡಿಸಿದ್ದ ಅಜ್ಜಿ ಇಂದು ವಯೋ ಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.

Siddhava Methri
Siddhava Methri

By

Published : Jul 31, 2020, 12:29 PM IST

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಬೆಳಗಾವಿಗೆ ಬಂದಾಗ ಅವರನ್ನು ತಮ್ಮ ಮನೆಯಲ್ಲಿ ಇರಿಸಿಕೊಂಡು ಉಟೋಪಚಾರ ಮಾಡಿದ್ದ ಸಿದ್ಧವ್ವ ಮೇತ್ರಿ ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ನಗರದ ಕಂಗ್ರಾಳಿ ಗಲ್ಲಿಯ ನಿವಾಸಿಯಾಗಿರುವ ಸಿದ್ದವ್ವ ಮೇತ್ರಿ (95), ಹಲವು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಕೊನೆಯುಸಿರೆಳೆದಿದ್ದಾರೆ.

1939ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಿ, ಇವರೇ ಅಡುಗೆ ಮಾಡಿ ಊಟ‌ ಬಡಿಸಿದ್ದರು. ಇದರಿಂದ ಅಂಬೇಡ್ಕರ್ ಸಂತೃಪ್ತರಾಗಿದ್ದರು. ನಿಮ್ಮಂತಹ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡಿ, ಸಮಾಜದಲ್ಲಿ ಬೆಳೆಯಬೇಕು ಎಂಬ ಅಂಬೇಡ್ಕರ್ ಸಲಹೆಯಿಂದ ಅಜ್ಜಿ ಪ್ರಭಾವಿತರಾಗಿದ್ದರು. ಅಷ್ಟೇ ಅಲ್ಲ ತಮ್ಮ ಜೀವಿತಾವಧಿಯಲ್ಲಿ ಅಂಬೇಡ್ಕರ್ ಸಿದ್ಧಾಂತದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ವೃದ್ಧೆ ಸಿದ್ದವ್ವ ಅವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ‌ ಮತ್ತು ಇವರ ಕುಟುಂಬದ ಸದಸ್ಯರಿಗೆ ಮತ್ತು ಅಂಬೇಡ್ಕರ್ ಸಿದ್ಧಾಂತದ ಪ್ರಚಾರದಲ್ಲಿದ್ದ ಇವರ ತಂಡದವರಿಗೆ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲೆಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ‌ ಸಂತಾಪ ಸೂಚಿಸಿದ್ದಾರೆ.

ABOUT THE AUTHOR

...view details