ಬೆಳಗಾವಿ : ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ನವರಾತ್ರಿ ಹಾಗೂ ಇತರ ಉತ್ಸವಗಳನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಿಸುವಂತೆ ಜಿಲ್ಲಾ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನ್ ಲಾಕ್-5.0 ರ ಮಾರ್ಗಸೂಚಿಗಳು ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸುತ್ತೋಲೆಯಲ್ಲಿ ತಿಳಿಸಿರುವಂತೆ ಸರಳ ಮತ್ತು ಸಾಂಕೇತಿಕವಾಗಿ ನವರಾತ್ರಿ ಆಚರಿಸಲು ದೇವಸ್ಥಾನ ಆಡಳಿತ ಮಂಡಳಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.