ಕರ್ನಾಟಕ

karnataka

ETV Bharat / state

ಬೆಳಗಾವಿಯ ಸ್ಮಾರ್ಟ್ ಸಿಟಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ‌ಹೆಬ್ಬಾಳ್ಕರ್​​​​ - ಸ್ಮಾರ್ಟ್ ಸಿಟಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ‌ಹೆಬ್ಬಾಳ್ಕರ್

ಬೆಳಗಾವಿಯ ಸ್ಮಾರ್ಟ್ ಸಿಟಿ ಯೊಜನೆಗೆ ಅನುದಾನ ಬಿಡುಗಡೆಯಾಗಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗುದ್ದಲಿ ಪೂಜೆ ನೆರವೇರಿಸಿದರು.

ಲಕ್ಷ್ಮಿ ‌ಹೆಬ್ಬಾಳ್ಕರ್
ಲಕ್ಷ್ಮಿ ‌ಹೆಬ್ಬಾಳ್ಕರ್

By

Published : Dec 8, 2019, 10:54 AM IST

ಬೆಳಗಾವಿ:ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದ ಸ್ಮಾರ್ಟ್ ಸಿಟಿ ಯೋಜನೆಯ ಪಟ್ಟಿಯಲ್ಲಿರುವ ‌ಬೆಳಗಾವಿಗೆ ಅನುದಾನ ಬಿಡುಗಡೆಯಾಗಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಾಮಗಾರಿಗೆ ಚಾಲನೆ ನೀಡಿದರು.

ಸ್ಮಾರ್ಟ್​​ ಸಿಟಿ ಯೋಜನೆಯಡಿ 7 ಕೋಟಿ ರೂ.ಗಳ ವೆಚ್ಚದಲ್ಲಿ ನಗರದ ಎಪಿಎಂಸಿ ಯಾರ್ಡ್​ನಿಂದ ಕಂಗ್ರಾಳಿ ಕೆ.ಹೆಚ್ ಗ್ರಾಮದ ಶಿವಾಜಿ ಮೂರ್ತಿಯವರೆಗೆ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ಶನಿವಾರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​​ ಮತ್ತು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಗುದ್ದಲಿ ಪೂಜೆ ನೆರವೇರಿಸಿದರು.

ಸುಮಾರು 9.20 ಕಿಮೀ ವೈಟ್ ಟಾಪಿಂಗ್ ರಸ್ತೆಯ ನಿರ್ಮಾಣ, ರಸ್ತೆಯ ಎರಡೂ ಬದಿಗೆ ಎರಡು ಮೀಟರ್ ಫುಟ್​​​ಪಾತ್​​ ನಿರ್ಮಾಣ ಹಾಗೂ ಪೇವರ್ಸ್ ಅಳವಡಿಕೆ, ಅಲಂಕಾರಿಕ ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ABOUT THE AUTHOR

...view details