ಬೆಳಗಾವಿ : ಹಾವು ಕಚ್ಚಿ ಎರಡು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದಲ್ಲಿ ನಡೆದಿದೆ.
ಹಾವು ಕಚ್ಚಿ ಎರಡು ವರ್ಷದ ಬಾಲಕ ಸಾವು - ನರಸಾಪುರ
ಮನೆಯಲ್ಲಿ ಆಟವಾಡುತ್ತಿದ್ದ 2 ವರ್ಷದ ಬಾಲಕನಿಗೆ ಹಾವು ಕಚ್ಚಿದ ಪರಿಣಾಮ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹಾವು ಕಚ್ಚಿ ಎರಡು ವರ್ಷದ ಬಾಲಕ ಸಾವು
ವಿರೇಶ ಗುಂಡದಾಳೆ (2) ಮೃತ ಬಾಲಕ. ಮನೆಯಲ್ಲಿ ಆಟವಾಡುತ್ತಿದ್ದಾಗ ಒಳಬಂದ ಹಾವು ಬಾಲಕನಿಗೆ ಕಚ್ಚಿದೆ. ತಕ್ಷಣ ಪಾಲಕರು ಮಗುವನ್ನು ಆಸ್ಪತ್ರೆಗೆ ಸೇರಿಸಿದ್ದರು. ಚಿಕಿತ್ಸೆ ಫಲಿಸದೆ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.
ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದಲ್ಲಿರುವ ಅಜ್ಜಿ ಮನೆಯಲ್ಲಿ ಬಾಲಕ ಆಟವಾಡುವಾಗ ಈ ಘಟನೆ ನಡೆದಿದೆ. ಕಟಕೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.