ಬೆಳಗಾವಿ:ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ಸಭೆಯಲ್ಲಿ ಸಾಮಾಜಿಕ ಅಂತರವೇ ಮಾಯವಾಗಿದ್ದು ಕಂಡುಬಂದಿದೆ.
ರಮೇಶ್ ಜಾರಕಿಹೊಳಿ ನೇತೃತ್ವದ ಜಿಲ್ಲಾಮಟ್ಟದ ಸಭೆಯಲ್ಲಿ ಸಾಮಾಜಿಕ ಅಂತರ ಮಾಯ - DC MG Hiremath
ಬೆಳಗಾವಿಯಲ್ಲಿ ಸೇರಿದಂತೆ ಹಲವೆಡೆ ಕೊರೊನಾ ಏರಿಕೆಯಾಗುತ್ತಲೇ ಇದೆ. ಈ ನಡುವೆ ಕೊರೊನಾ ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಸಾಮಾಜಿಕ ಅಂತರ ಕಾಪಾಡದೆ ಅಧಿಕಾರಿಗಳು ಒಟ್ಟಿಗೆ ಸೇರಿರುವುದು ಕಂಡುಬಂದಿದೆ.
ಅಧಿಕಾರಿ ಸೇರಿ ಒಟ್ಟು 13 ಮಂದಿ ವೇದಿಕೆ ಹಂಚಿಕೊಂಡಿದ್ದರು. ಜಿಲ್ಲೆಯಲ್ಲಿ ಕೊರೊನಾ ಹಾವಳಿ ಮಿತಿಮೀರುತ್ತಿದ್ದು, ಸಾವಿನ ಪ್ರಮಾಣವು ಹೆಚ್ಚಾಗುತ್ತಿದೆ. ಕೊರೊನಾ ಅವಾಂತರ ಮಧ್ಯೆಯೇ ಸಭೆ ನಡೆಸಲಾಗುತ್ತಿದೆ.
ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕೇಂದ್ರ ಸಚಿವ ಸುರೇಶ ಅಂಗಡಿ, ಸಚಿವೆ ಶಶಿಕಲಾ ಜೊಲ್ಲೆ ಹಾಜರಾಗಿದ್ದಾರೆ. ಸಂಸದ ಅಣ್ಣಾಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಶಾಸಕ ಅನಿಲ್ ಬೆನಕೆ, ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಜಿ.ಪಂ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ್ ಕಟಾಂಬಳೆ, ಜಿಲ್ಲಾಧಿಕಾರಿ ಎಂಜಿ ಹಿರೇಮಠ, ಜಿ.ಪಂ ಸಿಇಓ ಕೆ.ವಿ.ರಾಜೇಂದ್ರ, ಪೊಲೀಸ್ ಆಯುಕ್ತ ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ ಹಾಜರಾಗಿದ್ದರು.