ಕರ್ನಾಟಕ

karnataka

ETV Bharat / state

3ನೇ ಹಂತದ ಆಪರೇಷನ್ ಕಮಲ ನಡೆಯಬಹುದು: ಮಹೇಶ್​ ಕುಮಟಳ್ಳಿ - ಅಥಣಿ ಶಾಸಕ ಮಹೇಶ್ ಕುಮಟಳ್ಳಿ

ಶಿರಾ ಹಾಗೂ ಆರ್ ​ಆರ್ ನಗರ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಡಿಸಿಎಂ ಲಕ್ಷ್ಮಣ್ ಸವದಿ ಪ್ರಚಾರ ನಡೆಸಿದ ವೇಳೆ ಕಾಂಗ್ರೆಸ್ ಪಕ್ಷದಿಂದ ಕೆಲವು ಶಾಸಕರು ಬರುತ್ತಾರೆಂದು ನೀಡಿದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಕಾಂಗ್ರೆಸ್ ಪಕ್ಷದಿಂದ ಹಲವರು ಬರಬಹುದು ಎಂದು ತಿಳಿಸಿದ್ದಾರೆ.

Mahesh kumatalli
ಅಥಣಿ ಶಾಸಕ ಮಹೇಶ್ ಕುಮಟಳ್ಳಿ

By

Published : Nov 4, 2020, 9:05 AM IST

ಅಥಣಿ: ಮೂರನೇ ಹಂತದ ಆಪರೇಷನ್ ಕಮಲ ನಡೆಯಬಹುದು. ಕಾಂಗ್ರೆಸ್ ಮುಖಂಡರು ಸದ್ಯದಲ್ಲೇ ಬಿಜೆಪಿ ಪಕ್ಷಕ್ಕೆ ಬರುತ್ತಾರೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅಭಿಪ್ರಾಯಪಟ್ಟಿದ್ದಾರೆ.

ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿಕೆ

ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಕೆಲವು ಮುಖಂಡರು, ಶಾಸಕರು ಬಿಜೆಪಿಗೆ ಬರುವ ಸಾಧ್ಯತೆಯಿದೆ. ಅವರೆ ಬಹಿರಂಗವಾಗಿ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಡಿಸಿಎಂ ಲಕ್ಷ್ಮಣ್ ಸವದಿ ಅವರ ಜೊತೆ ಸಂಪರ್ಕದಲ್ಲಿದ್ದಾರೆ. ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಎಲ್ಲರೂ ಬಿಜೆಪಿಗೆ ಬರುತ್ತಾರೆ ಎಂದು ನಗೆ ಚಟಾಕಿ ಹಾರಿಸಿದರು.

ABOUT THE AUTHOR

...view details