ಬೆಳಗಾವಿ: ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡುವ ಇಂಗಿತ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ರಾಜ್ಯದ ಜನರನ್ನು ಹುಚ್ಚರನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ವ್ಯಂಗ್ಯವಾಡಿದರು.
ದೇವೇಗೌಡ್ರು ರಾಜ್ಯದ ಜನರನ್ನು ಹುಚ್ಚರನ್ನಾಗಿ ಮಾಡಲು ಹೊರಟಿದ್ದಾರೆ: ನಡಹಳ್ಳಿ - SP Patil Latest News
ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡುವ ಇಂಗಿತ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಟಾಂಗ್ ಕೊಟ್ಟ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ.
ಗೋಕಾಕ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಈಗ ಖರ್ಗೆ ಅವರ ನೆನಪಾಗುತ್ತಿದೆ. ಮೈತ್ರಿ ಸರ್ಕಾರದ ಸಂದರ್ಭದಲ್ಲೇ ಖರ್ಗೆ ಅವರನ್ನು ಸಿಎಂ ಮಾಡಬಹುದಿತ್ತಲ್ವಾ? ರಾಜ್ಯದ ಜನರು ಪ್ರಜ್ಞಾವಂತರಿದ್ದು, ರಾಜ್ಯದಲ್ಲಿ ಸ್ಥಿರ ಸರ್ಕಾರ ರಚನೆಗಾಗಿ ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗೋಕಾಕ್ ಕ್ಷೇತ್ರದ ಉಪ ಚುನಾವಣಾ ಬಹಿರಂಗ ಪ್ರಚಾರಕ್ಕಿಂದು ಕೊನೆಯ ದಿನ. ಹೀಗಾಗಿ ನಾನು, ಬಾಲಚಂದ್ರ ಜಾರಕಿಹೊಳಿ ಮತ್ತು ರಮೇಶ್ ನೇತೃತ್ವದಲ್ಲಿ ಮೂರು ತಂಡ ಮಾಡಿದ್ದೇವೆ. ಇಂದು ಕ್ಷೇತ್ರದ 95 ಗ್ರಾಮಗಳಿಗೆ ಭೇಟಿ ನೀಡಿ, ಬೂತ್ ಮಟ್ಟದ ಕಾರ್ಯಕರ್ತರನ್ನು ಭೇಟಿ ಮಾಡಿ ಬಿಜೆಪಿಗೆ ಹೆಚ್ಚಿನ ಮತ ಬರುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದರು.