ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇತೃತ್ವದಲ್ಲಿ ಕ್ಷೇತ್ರದ ಇಪ್ಪತೈದಕ್ಕೂ ಹೆಚ್ಚಿನ ವಿಕಲಚೇತನರಿಗೆ ಕೋವಿಡ್ ಲಸಿಕೆ ನೀಡಲಾಯಿತು.
ಬಳಿಕ ಮಾತನಾಡಿದ ಹೆಬ್ಬಾಳ್ಕರ್ ,ವಿಕಲಚೇತನರು ದೇವರ ಮಕ್ಕಳಿದ್ದಂತೆ. ಅವರನ್ನು ಪ್ರೋತ್ಸಾಹಿಸಿ, ಪೋಷಿಸಿ ಬೆಳೆಸುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ. ಸ್ವಾವಲಂಬಿ, ಸ್ವಾಭಿಮಾನದ ಬದುಕು ಸಾಗಿಸಬೇಕೆಂಬ ಅವರ ಕನಸುಗಳಿಗೆ ನೂರೆಂಟು ವಿಘ್ನಗಳಿವೆ. ಅವರ ಕನಸುಗಳಿಗೆ ನೀರೆರೆಯುವುದಕ್ಕೆ, ಅವರ ರಕ್ಷಣೆಗೆ ಸದಾಕಾಲವೂ ನಿಲ್ಲುವುದಕ್ಕೆ ನಾನು ಸದಾ ಸಿದ್ದನಿದ್ದೇನೆ ಎಂದರು.
ಇದಲ್ಲದೇ ಕೋವಿಡ್ ವಾರಿಯರ್ಸ್ಗಳಂತೆ ಹೋರಾಡುತ್ತಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಆರೋಗ್ಯದ ಬಗ್ಗೆಯೂ ವಿಚಾರಿಸಿದ ಲಕ್ಷ್ಮೀ, ಕೋವಿಡ್ ಲಸಿಕೆಗಳನ್ನು ಹಾಕಿಸಿಕೊಳ್ಳುವಂತೆ, ಸರ್ಕಾರದಿಂದ ವೇತನ ಸೇರಿದಂತೆ ಯಾವುದೇ ಸೌಲಭ್ಯ ಒದಗಿಸುವಲ್ಲಿ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರುವಂತೆ ಧೈರ್ಯ ತುಂಬಿದರು.