ಬೆಳಗಾವಿ: ಮೇ 22ರಿಂದ ಕರ್ನಾಟಕದಲ್ಲಿ ಪ್ರಾಯೋಗಿಕವಾಗಿ ಎರಡು ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಮೇ 22ರಿಂದ ರಾಜ್ಯದಲ್ಲಿ ವಿಶೇಷ ರೈಲು ಸಂಚಾರ ಆರಂಭ: ಕೇಂದ್ರ ಸಚಿವ ಸುರೇಶ ಅಂಗಡಿ - ಕೇಂದ್ರ ಸಚಿವ ಸುರೇಶ್ ಅಂಗಡಿ
ಲಾಕ್ಡೌನ್ ಸಡಿಲಿಕೆಯ ಬಳಿಕ ನವದೆಹಲಿಯಿಂದ ರಾಜ್ಯಕ್ಕೆ ವಿಶೇಷ ರೈಲು ಸೇರಿದಂತೆ ಶ್ರಮಿಕ್ ರೈಲುಗಳ ಓಡಾಟ ಆರಂಭವಾಗಿತ್ತು. ಇದೀಗ ಮೇ 22ರಿಂದ ರಾಜ್ಯದಲ್ಲಿ ಎರಡು ವಿಶೇಷ ರೈಲು ಸಂಚರಿಸಲಿವೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ. ಮೇ 22ರಂದು ಬೆಂಗಳೂರು - ಮೈಸೂರಿಗೆ ಪ್ರಾಯೋಗಿಕ ರೈಲು ಸಂಚಾರ ಆರಂಭವಾಗಲಿದೆ ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮೇ 22ರಂದು ಬೆಂಗಳೂರಿನಿಂದ ಮೈಸೂರಿಗೆ ಪ್ರಾಯೋಗಿಕ ರೈಲು ಸಂಚಾರಗಳು ಆರಂಭವಾಗಲಿದ್ದು, ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ರೈಲ್ವೆ ಇಲಾಖೆಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.
ಹೀಗಾಗಿ ಯಡಿಯೂರಪ್ಪ ಮನವಿ ಮೇರೆಗೆ ರಾಜ್ಯದಲ್ಲಿ ಪ್ರಾಯೋಗಿಕವಾಗಿ ಎರಡು ವಿಶೇಷ ರೈಲುಗಳ ಸಂಚಾರ ಆರಂಭವಾಗಲಿದೆ ಎಂದರು. ಇನ್ಮು ರೈಲು ಪ್ರಯಾಣಿಕರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿಯೇ ಟಿಕೆಟ್ ಬುಕ್ಕಿಂಗ್ ಮಾಡಬೇಕು. ಟಿಕೆಟ್ ಕನ್ಫರ್ಮ್ ಆದ ಮೇಲೆಯೇ ರೈಲ್ವೆ ನಿಲ್ದಾಣಕ್ಕೆ ಬರಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು ಎಂದು ಪ್ರಯಾಣಿಕರಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮನವಿ ಮಾಡಿಕೊಂಡರು.