ಕರ್ನಾಟಕ

karnataka

ನೈಟ್ ಕರ್ಫ್ಯೂ ಜಾರಿಗೆ ಎಸ್​​.ಆರ್​.ಪಾಟೀಲ್ ಖಂಡನೆ

By

Published : Apr 11, 2021, 6:03 PM IST

ಕೊರೊನಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು, ರಾಜ್ಯದಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಮತ್ತು ಸೋಂಕಿತರಿಗೆ ಕೂಡಲೇ ಚಿಕಿತ್ಸೆ ನೀಡಬೇಕು ಎಂದು ಎಸ್​.ಆರ್​.ಪಾಟೀಲ್​​ ಹೇಳಿದ್ದಾರೆ.

Sr Patil
Sr Patil

ಬೆಂಗಳೂರು: ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿರುವುದನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದ 7 ಜಿಲ್ಲೆಗಳ 8 ನಗರಗಳಲ್ಲಿ ರಾಜ್ಯ ಸರ್ಕಾರ ಕೊರೊನಾ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದೆ.

ಕೊರೊನಾ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ನೈಟ್ ಕರ್ಫ್ಯೂ ಜಾರಿ ಮಾಡುವ ಮೂಲಕ ಮಧ್ಯಮ ಹಾಗೂ ಬಡ ವರ್ಗದ ಬೆನ್ನಿನ ಮೇಲೆ ಬರೆ ಎಳೆಯುವ ಕೆಲಸ ಮಾಡಿದೆ. ಕೊರೊನಾ ಸೋಂಕು ರಾತ್ರಿ ವೇಳೆ ಮಾತ್ರ ಹರಡುತ್ತಾ.? ಬೆಳಗ್ಗೆ ಹೊತ್ತು ವೈರಸ್ ಹರಡುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಮತ್ತು ಸೋಂಕಿತರಿಗೆ ಕೂಡಲೇ ಚಿಕಿತ್ಸೆ ನೀಡಬೇಕು. ಅದನ್ನು ಬಿಟ್ಟು ಕೊರೊನಾ ನಿಯಂತ್ರಣದ ಹೆಸರಲ್ಲಿ ರಾಜ್ಯ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ.

ಈಗಾಗಲೇ ಕೊರೊನಾ ಹಾಗೂ ಲಾಕ್​​ಡೌನ್​​ನಿಂದಾಗಿ ಜನಸಾಮಾನ್ಯರು ಆರ್ಥಿಕ ಸಂಕಷ್ಟ ಅನುಭವಿಸ್ತಿದ್ದಾರೆ. ಇದರ ಮಧ್ಯೆ ಸರ್ಕಾರ ನೈಟ್ ಕರ್ಫ್ಯೂ ಹೆಸರಿನಲ್ಲಿ ರಾತ್ರಿ 10 ಗಂಟೆಗೆ ವಾಣಿಜ್ಯ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರಿರುವುದು ದುರಂತವೇ ಸರಿ ಎಂದಿದ್ದಾರೆ.

ABOUT THE AUTHOR

...view details