ಕರ್ನಾಟಕ

karnataka

ETV Bharat / state

ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಮಹಾಸ್ವಾಮಿಗಳಿಗೆ ಕೊರೊನಾ ಪಾಸಿಟಿವ್ - ಶ್ರೀಶೈಲ ಕ್ಷೇತ್ರ

ಕಳೆದ ವಾರ ಶ್ರೀಶೈಲ ಕ್ಷೇತ್ರದಲ್ಲಿ ಜರುಗಿದ ಯುಗಾದಿ ಜಾತ್ರಾ ಮಹೋತ್ಸವದಲ್ಲಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಪಾಲ್ಗೊಂಡಿದ್ದರು..

dr channasiddarama swamiji corona positive news
ಡಾ. ಚನ್ನಸಿದ್ಧರಾಮ ಮಹಾಸ್ವಾಮಿಗಳಿಗೆ ಕೊರೊನಾ ಪಾಸಿಟಿವ್

By

Published : Apr 21, 2021, 3:11 PM IST

ಚಿಕ್ಕೋಡಿ :ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಓದಿ: ಬೆಂಗಳೂರು ಮೆಟ್ರೋ ಹಂತ 2ಎ, 2ಬಿಗೆ ಅನುಮೋದನೆ: ಕೇಂದ್ರಕ್ಕೆ ಧನ್ಯವಾದ ಹೇಳಿದ ತೇಜಸ್ವಿ ಸೂರ್ಯ

ಚಿಕ್ಕೋಡಿ ತಾಲೂಕಿನ ಶ್ರೀಕ್ಷೇತ್ರ ಯಡೂರದಲ್ಲಿ ಹೋಂ ಐಸೋಲೇಷನ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದು, ಜಗದ್ಗುರುಗಳ ಆರೋಗ್ಯ ಸ್ಥಿರವಾಗಿದೆ ಎಂದು ಆಡಳಿತ ಮಂಡಳಿ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.

ಕಳೆದ ವಾರ ಶ್ರೀಶೈಲ ಕ್ಷೇತ್ರದಲ್ಲಿ ಜರುಗಿದ ಯುಗಾದಿ ಜಾತ್ರಾ ಮಹೋತ್ಸವದಲ್ಲಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಪಾಲ್ಗೊಂಡಿದ್ದರು. ಇವರ ಜೊತೆಗೆ ಜಗದ್ಗುರುಗಳ ಸೇವಾ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಆದ್ದರಿಂದ ಇತ್ತೀಚೆಗೆ ಜಗದ್ಗುರುಗಳ ಮತ್ತು ಸಿಬ್ಬಂದಿ ಸಂಪರ್ಕಕ್ಕೆ ಬಂದವರೆಲ್ಲರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ.

ABOUT THE AUTHOR

...view details