ಅಥಣಿ: ಅಥಣಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಬುಧವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಮೂರನೇ ಬಾರಿ ಅಧ್ಯಕ್ಷರಾಗಿ ಅಥಣಿ ತಾಲೂಕಿನ ಸವದಿ ಗ್ರಾಮದ ಶ್ರೀಶೈಲ ಕಲ್ಲಪ್ಪಾ ದುಲಾರಿ, ಉಪಾಧ್ಯಕ್ಷರಾಗಿ ಮದಭಾವಿ ಗ್ರಾಮದ ಶಿವಾನಂದ ರಾಮಣ್ಣಾ ಮಗದುಮ್ಮ ಅವಿರೋಧವಾಗಿ ಆಯ್ಕೆಯಾದರು.
3ನೇ ಬಾರಿಗೆ ಅಥಣಿ ಎಪಿಎಂಸಿ ಅಧ್ಯಕ್ಷರಾಗಿ ಶ್ರೀಶೈಲ ಕಲ್ಲಪ್ಪಾ ದುಲಾರಿ ಆಯ್ಕೆ - Election of Athani Agro Products Market Committee
ಅಥಣಿ ಎಪಿಎಂಸಿಯ ಅಧ್ಯಕ್ಷರಾಗಿ ಮೂರನೇ ಬಾರಿಗೆ ಅಥಣಿ ತಾಲೂಕಿನ ಸವದಿ ಗ್ರಾಮದ ಶ್ರೀಶೈಲ ಕಲ್ಲಪ್ಪಾ ದುಲಾರಿ, ಉಪಾಧ್ಯಕ್ಷರಾಗಿ ಮದಭಾವಿ ಗ್ರಾಮದ ಶಿವಾನಂದ ರಾಮಣ್ಣಾ ಮಗದುಮ್ಮ ಅವಿರೋಧವಾಗಿ ಆಯ್ಕೆಯಾದರು.
Apmc
ಇದೇ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಶ್ರೀಶೈಲ ದುಲಾರಿ, ಡಿಸಿಎಂ ಲಕ್ಷ್ಮಣ ಸವದಿ ಮಾರ್ಗದರ್ಶನದಲ್ಲಿ ಮೂರನೇ ಅವಧಿಗೆ ಆಯ್ಕೆಯಾಗಿದ್ದೇನೆ. ಅವರ ಮಾರ್ಗದರ್ಶನದಲ್ಲಿ ರೈತರಿಗೆ ಹಾಗೂ ವ್ಯಾಪಾರಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಅಥಣಿ ತಹಶೀಲ್ದಾರ್ ದುಂಡಪ್ಪಾ ಕೋಮಾರ, ಎಪಿಎಂಸಿ ಇತರೆ ಸದಸ್ಯರು, ಅಧಿಕಾರಿಗಳು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.