ಅಥಣಿ:ಕೊರೊನಾತಂಕದ ನಡುವೆಯೂ ತಾಲೂಕಿನಲ್ಲಿಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದೆ. ಈ ಹಿನ್ನೆಲೆ ಜಿಲ್ಲಾಡಳಿತದ ವತಿಯಿಂದ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ತಾಲೂಕು ವಲಯದಲ್ಲಿ 21 ಪರೀಕ್ಷಾ ಕೇಂದ್ರಗಳಿದ್ದು, ಈ ಬಾರಿ ಅನಂತಪುರ ಗ್ರಾಮದಲ್ಲಿ ಉಪಕೇಂದ್ರವೊಂದನ್ನು ಆರಂಭಿಸಲಾಗಿದೆ. ಒಟ್ಟು 22 ಕೇಂದ್ರಗಳಲ್ಲಿ 328 ಕೊಠಡಿಗಳಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ. 3126 ಬಾಲಕರು ಮತ್ತು 2705 ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದಾರೆ.
ಅಥಣಿಯಲ್ಲಿ ಮುಂಜಾಗ್ರತಾ ಕ್ರಮಗಳೊಂದಿಗೆ ಎಸ್ಎಸ್ಎಲ್ಸಿ ಪರೀಕ್ಷೆ - athani sslc exams latest news
ಪರೀಕ್ಷಾ ಕೇಂದ್ರಕ್ಕೆ ಹಾಜರಾದ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ಸಹಾಯದಿಂದ ದೇಹದ ಉಷ್ಣತೆಯ ಪರೀಕ್ಷೆ ನಡೆಸಿ, ನಂತರ ಸ್ಯಾನಿಟೈಸರ್ ಹಾಗೂ ಮಾಸ್ಕ್ ನೀಡಲಾಯಿತು.
ಆರೋಗ್ಯ ಇಲಾಖೆಯಿಂದ ಥರ್ಮಲ್ ಸ್ಕ್ಯಾನಿಂಗ್..
ಪರೀಕ್ಷಾ ಕೇಂದ್ರಕ್ಕೆ ಹಾಜರಾದ ಮಕ್ಕಳಿಗೆ ಆರೋಗ್ಯ ಇಲಾಖೆ ಸಹಾಯದಿಂದ ದೇಹದ ಉಷ್ಣತೆಯ ಪರೀಕ್ಷೆ ನಡೆಸಲಾಯಿತು. ನಂತರ ಸ್ಯಾನಿಟೈಸರ್ ಹಾಗೂ ಮಾಸ್ಕ್ ನೀಡಲಾಯಿತು.
ಹಾಗೆಯೇ ಗ್ರಾಮೀಣ ಭಾಗದಿಂದ ಪರೀಕ್ಷಾ ಕೇಂದ್ರಗಳಿಗೆ ಬರುವ ಮಕ್ಕಳನ್ನು ಕರೆತರಲು ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಒಟ್ಟಾರೆಯಾಗಿ ಇದುವರೆಗೂ ತಾಲೂಕಿನ ಯಾವುದೇ ವಿದ್ಯಾರ್ಥಿಗಳಿಗೂ ತೊಂದರೆಯಾಗದಂತೆ ಅಧಿಕಾರಿಗಳು ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಿದ್ದಾರೆ.