ಚಿಕ್ಕೋಡಿ(ಬೆಳಗಾವಿ): ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ನಡೆಸಬೇಕೆಂಬ ನಿರ್ಧಾರ ತೆಗೆದುಕೊಂಡಿದೆ. ಆದರೆ ಈ ನಿರ್ಧಾರ ತಪ್ಪಾಗಿದ್ದು, ಸರ್ಕಾರ ಪರೀಕ್ಷೆಗಳನ್ನು ನಡೆಸಬಾರದು ಎಂದು ಸಾಮಾಜಿಕ ಹೋರಾಟಗಾರ ಚಂದ್ರಕಾಂತ ಹುಕ್ಕೇರಿ ಆಗ್ರಹಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ರದ್ದು ಮಾಡಿ: ಚಂದ್ರಕಾಂತ ಹುಕ್ಕೇರಿ
ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ನಡೆಸಬೇಕೆಂಬ ನಿರ್ಧಾರ ತೆಗೆದುಕೊಂಡಿದೆ. ಆದರೆ ಈ ನಿರ್ಧಾರ ತಪ್ಪಾಗಿದ್ದು, ಸರ್ಕಾರ ಪರೀಕ್ಷೆಗಳನ್ನು ನಡೆಸಬಾರದು ಎಂದು ಸಾಮಾಜಿಕ ಹೋರಾಟಗಾರ ಚಂದ್ರಕಾಂತ ಹುಕ್ಕೇರಿ ಆಗ್ರಹಿಸಿದ್ದಾರೆ.
ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ನಡೆಸುವಂತೆ ಕೆಲವರು ಒತ್ತಾಯಿಸುತ್ತಿದ್ದಾರೆ. ಆದರೆ, ಮಕ್ಕಳು ಸರಿಯಾಗಿ ಅಭ್ಯಾಸ ಮಾಡಿಲ್ಲ. ಮಕ್ಕಳ ಹಾಗೂ ಪಾಲಕರ ಮನಸ್ಥಿತಿ ಕೂಡ ಸರಿ ಇಲ್ಲ. ಪರೀಕ್ಷೆ ವೇಳೆ ಅಂತರ ಕಾಯ್ದಕೊಳ್ಳುವಂತೆ ನೋಡಿಕೊಳ್ಳಲಾಗುವುದು ಎಂದು ಸರ್ಕಾರ ಹೇಳಿದ್ದರೂ ಸಹಿತ ಅದು ಅಸಾಧ್ಯ. ಒಂದು ವೇಳೆ ಒಬ್ಬನೇ ಒಬ್ಬ ಸೋಂಕಿತ ವಿದ್ಯಾರ್ಥಿ ಪರೀಕ್ಷೆಗೆ ಆಗಮಿಸಿದರೂ ಇಡೀ ವಿದ್ಯಾರ್ಥಿ ಸಮೂಹಕ್ಕೆ ಕೊರೊನಾ ಹರಡುವ ಸಾಧ್ಯತೆ ಇದೆ. ಹೀಗಾಗಿ ಪರೀಕ್ಷೆ ಘೋಷಿಸಿ ಮಕ್ಕಳ ಅಮೂಲ್ಯ ಭವಿಷ್ಯ ಹಾಳು ಮಾಡಬೇಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ದಯಮಾಡಿ ಪರೀಕ್ಷೆ ರದ್ದು ಮಾಡಿ. ಕಳೆದ ಪರೀಕ್ಷೆಯ ಅಂಕದ ಮೇಲೆ ಅವರಿಗೆ ಅಂಕ ನೀಡಿ ಪಾಸ್ ಮಾಡಿ ಅವರನ್ನು ಮುಂದಿನ ತರಗತಿಗೆ ಕಳಿಸುವ ವ್ಯವಸ್ಥೆ ಮಾಡಿ. ಮಕ್ಕಳ ಭವಿಷ್ಯದ ಕಡೆ ಗಮನ ಹರಿಸಿ. ಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು ಮಕ್ಕಳನ್ನು ಪರೀಕ್ಷೆಗೆ ಕಳಿಸುವುದಿಲ್ಲ. ಅದಕ್ಕಾಗಿ ಸರ್ಕಾರದ ಹಣ ವಿನಾ ಕಾರಣ ಹಾಳು ಮಾಡಬೇಡಿ. ಕಳೆದ ಮೂರು ತಿಂಗಳ ಹಿಂದೆ ನಡೆದ ಪರೀಕ್ಷೆಯ ಅನುಗುಣವಾಗಿ ಎಲ್ಲಾ ಎಸ್‌ಎಸ್‌ಎಲ್‌ಸಿ, ಪಿಯುಸಿ ಮಕ್ಕಳನ್ನು ಪಾಸ್ ಮಾಡಿ ಎಂದು ಸಾಮಾಜಿಕ ಹೋರಾಟಗಾರ ಚಂದ್ರಕಾಂತ ಹುಕ್ಕೇರಿ ಆಗ್ರಹಿಸಿದ್ದಾರೆ.