ಬೆಳಗಾವಿ:ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ದಿಢೀರ್ ಅಸ್ವಸ್ಥಳಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಎಲ್ಇಟಿ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ತೀವ್ರ ಅಸ್ವಸ್ಥ: ಪರೀಕ್ಷೆ ಮಧ್ಯೆ ಆಸ್ಪತ್ರೆಗೆ ದಾಖಲು - LET exam Center in Gokak
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ದಿಢೀರ್ ಅಸ್ವಸ್ಥಳಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಎಲ್ಇಟಿ ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದು, ಆಕೆಯನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ತೀವ್ರ ಅಸ್ವಸ್ಥ: ಪರೀಕ್ಷೆ ಮಧ್ಯೆ ಆಸ್ಪತ್ರೆಗೆ ದಾಖಲು
ತೀವ್ರ ಉಸಿರಾಟದ ಸಮಸ್ಯೆಯಿಂದ ವಿದ್ಯಾರ್ಥಿನಿ ಅಸ್ವಸ್ಥಳಾಗಿದ್ದು, ಪರೀಕ್ಷಾ ಕೇಂದ್ರ ಸಿಬ್ಬಂದಿ ಸ್ಥಳಕ್ಕೆ ಆ್ಯಂಬುಲೆನ್ಸ್ ಕರೆಯಿಸಿ ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಪರೀಕ್ಷಾ ಕೊಠಡಿಯಲ್ಲೇ ಬಾಲಕಿಗೆ ವೈದ್ಯಕೀಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬಾಲಕಿಯನ್ನು ಗೋಕಾಕ್ ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದಾಗಿ ಪರೀಕ್ಷಾ ಕೊಠಡಿಯ ಇತರ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ.