ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಕಾಗವಾಡ ಗಡಿಯಲ್ಲಿ ತಪಾಸಣೆ - sslc exam for maharashtra border students

ಮಹಾರಾಷ್ಟ್ರದಿಂದ ಬಂದು ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಕರ್ನಾಟಕ-ಮಹಾರಾಷ್ಟ್ರದ ಗಡಿಯಲ್ಲಿರುವ ಕಾಗವಾಡ ಪಟ್ಟಣದ ಮಲ್ಲಿಕಾರ್ಜುನ ಪ್ರೌಢ ಶಾಲೆಯಲ್ಲಿ ಪ್ರತ್ಯೇಕ ಪರೀಕ್ಷಾ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾಪೀಡಿತರ ಸಂಖ್ಯೆ ಹೆಚ್ಚಾಗಿರುವ ಕಾರಣ ಅಲ್ಲಿಂದ ಆಗಮಿಸುವ ಮಕ್ಕಳಿಗೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ.

examinations
ಮಹಾರಾಷ್ಟ್ರದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಕಾಗವಾಡ ಗಡಿಯಲ್ಲಿ ತಪಾಸಣೆ

By

Published : Jun 25, 2020, 12:23 PM IST

ಚಿಕ್ಕೋಡಿ:ಕರ್ನಾಟಕ - ಮಹಾರಾಷ್ಟ್ರದ ಗಡಿಯಲ್ಲಿರುವ ಕಾಗವಾಡ ಪಟ್ಟಣದ ಮಲ್ಲಿಕಾರ್ಜುನ ಪ್ರೌಢಶಾಲೆಯಲ್ಲಿ ಈ ಬಾರಿ‌ ಮಹಾರಾಷ್ಟ್ರದ 8 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.

ಮಹಾರಾಷ್ಟ್ರದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಕಾಗವಾಡ ಗಡಿಯಲ್ಲಿ ತಪಾಸಣೆ
ಈಗಾಗಲೇ ಕರ್ನಾಟಕ-ಮಹರಾಷ್ಟ್ರ ಗಡಿಯಲ್ಲಿರುವ ಕಾಗವಾಡ ಚೆಕ್​​ಪೋಸ್ಟ್​​ ಬಳಿ ಮಹಾರಾಷ್ಟ್ರದ ವಿದ್ಯಾರ್ಥಿಗಳು ಆಗಮಿಸಿದ್ದು, ಮಹಾರಾಷ್ಟ್ರದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಕರ್ನಾಟಕದ ಗಡಿಯಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳನ್ನು ಜಾಗರೂಕತೆಯಿಂದ ಪರೀಕ್ಷಾ ಕೇಂದ್ರಕ್ಕೆ ಕರೆ ತರಲು ಒಂದು ಬಸ್ ಹಾಗೂ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಕಾರಣ ಶಿಕ್ಷಣ ಇಲಾಖೆ ಎಚ್ಚರಿಕೆ ವಹಿಸಿದೆ.
ಮಹಾರಾಷ್ಟ್ರದಿಂದ ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಪಾಲಕರ ಜೊತೆ ಆಗಮಿಸಿದ್ದು, ಅಂತಹ ಮಕ್ಕಳಿಗೆ ಸ್ಕ್ರೀನಿಂಗ್ ಮಾಡಿ ಸ್ಯಾನಿಟೈಸರ್ ನೀಡಿ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಲಾಯ್ತು. ಕಾಗವಾಡ ಮಲ್ಲಿಕಾರ್ಜುನ ಫ್ರೌಢಶಾಲೆಯಲ್ಲಿ 8 ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಪರೀಕ್ಷಾ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಆ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ನೀಡಲಾಗಿದೆ. ಪರೀಕ್ಷೆ ಮುಗಿದ ನಂತರವೂ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಕರ್ನಾಟಕ ಗಡಿವರೆಗೂ ಬಸ್ ವ್ಯವಸ್ಥೆ ಕಲ್ಪಿಸಿದೆ.

ABOUT THE AUTHOR

...view details