ಕರ್ನಾಟಕ

karnataka

ETV Bharat / state

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಬಂದ್.. ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ.. - ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ

ಅಥಣಿ-ದರೂರ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಸಾರ್ವಜನಿಕರು ಪರದಾಡುವಂತ ಪರಸ್ಥಿತಿ ನಿರ್ಮಾಣವಾಗಿದೆ.

ಅಥಣಿ - ದರೂರ ಸೇತುವೆ ಸಂಪೂರ್ಣ ಜಲಾವೃತ

By

Published : Aug 7, 2019, 3:52 PM IST

ಚಿಕ್ಕೋಡಿ :ಅಥಣಿ-ದರೂರ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಸಾರ್ವಜನಿಕರು ಪರದಾಡುವಂತ ಪರಸ್ಥಿತಿ ನಿರ್ಮಾಣವಾಗಿದೆ.

ಈ ಸೇತುವೆ ಮೇಲೆ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಈ ಸೇತುವೆ ಬಂದ್ ಆಗಿದ್ದರಿಂದ ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಅಥಣಿ - ದರೂರ ಸೇತುವೆ ಸಂಪೂರ್ಣ ಜಲಾವೃತ..

ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್ ಹಾಕಿ ಹಗಲು ರಾತ್ರಿ ಕಾಯುತ್ತಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.

ಚಿಕ್ಕೋಡಿ ಉಪವಿಭಾಗದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಬಂದ್‌ನ ವಿವರ :

  • ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
  • ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ ಬಂದ್
  • ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಗಳು ಕಟ್
  • ಬಾಗಲಕೋಟೆ-ಮಹಾರಾಷ್ಟ್ರ ಸಂಪರ್ಕಿಸುವ ರಾಯಭಾಗ ತಾಲೂಕಿನ ಕುಡಚಿ ರಾಜ್ಯ ಹೆದ್ದಾರಿ ಬಂದ್

ಚಿಕ್ಕೋಡಿ ತಾಲೂಕಿನ ಮಾಂಜರಿ ಸೇರಿದಂತೆ ಹಲವೆಡೆ ರಸ್ತೆಗಳ ಮೇಲೆ ನೀರು ಹರಿಯುತ್ತಿದೆ . ಹೀಗೆ ಹಲವಾರು ಸಂಪರ್ಕ ಸೇತುವೆಗಳು ಬಂದ್ ಆಗಿವೆ.

ABOUT THE AUTHOR

...view details