ಬೆಳಗಾವಿ: ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಇಲ್ಲಿಯವರೆಗೆ ಯಾವುದೇ ಬರ ಪರಿಹಾರ ಧನ ನೀಡಿಲ್ಲ. ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ಕೇಂದ್ರದ ಮೇಲೆ ಒತ್ತಡ ಹಾಕಿ ಪರಿಹಾರ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ಕೇಂದ್ರದಿಂದ ಬರ ಪರಿಹಾರ ಕೊಡಿಸುವಲ್ಲಿ ಬಿಜೆಪಿ ಸಂಸದರು ವಿಫಲ: ಸತೀಶ್ ಜಾರಕಿಹೊಳಿ - Satish Jarkiholi
ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಕೇಂದ್ರದ ಮೇಲೆ ಒತ್ತಡ ಹಾಕಿ ನೆರೆ ಪರಿಹಾರ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ರು.
![ಕೇಂದ್ರದಿಂದ ಬರ ಪರಿಹಾರ ಕೊಡಿಸುವಲ್ಲಿ ಬಿಜೆಪಿ ಸಂಸದರು ವಿಫಲ: ಸತೀಶ್ ಜಾರಕಿಹೊಳಿ](https://etvbharatimages.akamaized.net/etvbharat/prod-images/768-512-4441859-thumbnail-3x2-bgm.jpg)
ಕೇಂದ್ರದಿಂದ ಪರಿಹಾರ ಕೊಡಿಸುವಲ್ಲಿ ರಾಜ್ಯದ ಬಿಜೆಪಿ ಸಂಸದರು ವಿಫಲ: ಸತೀಶ್ ಜಾರಕಿಹೊಳಿ
ಕೇಂದ್ರದಿಂದ ಪರಿಹಾರ ಕೊಡಿಸುವಲ್ಲಿ ರಾಜ್ಯದ ಬಿಜೆಪಿ ಸಂಸದರು ವಿಫಲ: ಸತೀಶ್ ಜಾರಕಿಹೊಳಿ
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೊದಲಿನಿಂದಲೂ ಅತಿ ಹೆಚ್ಚು ಆಯ್ಕೆಯಾಗುವ ಬಿಜೆಪಿ ಸಂಸದರಿಂದ ರಾಜ್ಯಕ್ಕೆ ಯಾವುದೇ ಲಾಭವಾಗಿಲ್ಲ. ಇಲ್ಲಿಯವರೆಗೆ ಕೇಂದ್ರ ರಾಜ್ಯಕ್ಕೆ ಯಾವುದೇ ಪರಿಹಾರ ಘೋಷಿಸಿಲ್ಲ. ಕೇವಲ ಪ್ರವಾಹ ನಿರಾಶ್ರಿತರಿಗೆ 10 ಸಾವಿರ ರೂ ನೀಡಿ ಸುಮ್ಮನಾಗುತ್ತಾರೆ ಎಂದು ಆರೋಪಿಸಿದ್ರು.
ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ಜೊತೆಗೆ ಬಾಡಿಗೆ ಹಣ ನೀಡುವುದಾಗಿ ಘೋಷಣೆ ಮಾಡಿದ ಸರ್ಕಾರ ಇಲ್ಲಿಯವರೆಗೆ ಯಾವುದೇ ಹಣ ನೀಡಿಲ್ಲ. ಇನ್ನೂ ಬೆಳೆ ಹಾನಿಗೆ ಪರಿಹಾರ ನೀಡಲು ಸರ್ಕಾರ ಕ್ರಮ ಕೈಗೊಂಡಿಲ್ಲ, ಹಾಗಾಗಿ ಪ್ರವಾಹ ಎದುರಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ರು.