ಅಥಣಿ:ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗಾವಿ ಪಟ್ಟಣದಲ್ಲಿ ಚಿಕಿತ್ಸೆ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಲಾಗಿದೆ ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು.
ಬೆಳಗಾವಿಯಲ್ಲೇ ಬ್ಲ್ಯಾಕ್ ಫಂಗಸ್ಗೆ ಚಿಕಿತ್ಸೆ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಿದ್ದೇವೆ: ಕುಮಟಳ್ಳಿ
ಅಥಣಿ ಪಟ್ಟಣದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಹಾಗೂ ಹಳ್ಳಿಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಮಹೇಶ್ ಕುಮಟಳ್ಳಿ ಸಭೆ ನಡೆಸಿದರು.
ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕಪ್ಪು ಶಿಲೀಂದ್ರ ರೋಗ ಕಂಡುಬರುತ್ತಿದೆ. ಚಿಕಿತ್ಸೆ ಪಡೆಯಲು ಹುಬ್ಬಳ್ಳಿ ಹಾಗೂ ಬೆಂಗಳೂರಿಗೆ ಹೋಗುವುದು ಅನಿವಾರ್ಯವಾಗಿದೆ. ಇದರಿಂದಾಗಿ ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಅವರ ಹತ್ತಿರ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹಾಗೂ ಉತ್ತರ ಕರ್ನಾಟಕ ಭಾಗದ 8 ಜನ ಶಾಸಕರು ಸೇರಿ ಸಿಎಂಗೆ ಮನವಿ ಸಲ್ಲಿಸಲಾಗಿದೆ. ಕೆಲವು ದಿನಗಳಲ್ಲಿ ಬೆಳಗಾವಿಯಲ್ಲೆ ಚಿಕಿತ್ಸೆ ನೀಡಲು ಪ್ರಾರಂಭ ಮಾಡಲಾಗುವುದೆಂದು ಭರವಸೆ ನೀಡಿದ್ದಾರೆಂದು ತಿಳಿಸಿದರು. ಅಥಣಿ ತಾಲೂಕಿನಲ್ಲಿ ವ್ಯಾಕ್ಸಿನ್ ಕೊರತೆಯಿದೆ, ಈ ವಾರದಲ್ಲಿ ವ್ಯಾಕ್ಸಿನ್ ಬರುತ್ತೆ ಗ್ರಾಮಿಣ ಭಾಗದ ಜನರು ವ್ಯಾಕ್ಸಿನ್ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.