ಕರ್ನಾಟಕ

karnataka

ETV Bharat / state

ಬೆಳಗಾವಿ: ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಮೇಲೆ ಕಲ್ಲೆಸೆತ - ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಮೇಲೆ ಕಲ್ಲೆಸೆತೆ

ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಮೇಲೆ ಕಲ್ಲು ತೂರಲಾಗಿದೆ. ಘಟನಾ ಸ್ಥಳಕ್ಕೆ ಮಾರ್ಕೆಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌

stone trow on bjp mla anil benake office in belagavi
ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಮೇಲೆ ಕಲ್ಲೆಸೆತ

By

Published : Feb 14, 2022, 9:01 AM IST

ಬೆಳಗಾವಿ: ಉತ್ತರ ಮತ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ಅವರ ಕಚೇರಿ ಮೇಲೆ ಅಪರಿಚಿತರು ಕಲ್ಲು ಎಸೆದು ಪರಾರಿಯಾಗಿರುವ ಘಟನೆ ಭಾನುವಾರ ತಡರಾತ್ರಿ ಘಟನೆ ನಡೆದಿದೆ.

ನಗರದ ಚವ್ಹಾಟ್ ಗಲ್ಲಿಯಲ್ಲಿರುವ ಕಚೇರಿ ಮೇಲೆ ಕಲ್ಲೆಸೆದಿದ್ದು, ಕಿಟಕಿಯ ಗಾಜು ಪುಡಿಪುಡಿಯಾಗಿವೆ. ಕಲ್ಲು ತೂರಾಟ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ‌.

ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಮಾರ್ಕೆಟ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.‌ ಪಾನಮತ್ತ ಯುವಕರು ಕಲ್ಲು ತೂರಾಟ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕಚೇರಿ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇದನ್ನೂ ಓದಿ:ಗೋವಾ, ಯುಪಿ, ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ​​

For All Latest Updates

TAGGED:

ABOUT THE AUTHOR

...view details