ಬೆಳಗಾವಿ:ಆಕ್ಸಿಜನ್ ಸಿಗದೇ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟ ಹಿನ್ನಲೆಯಲ್ಲಿ ಮೃತನ ಸಂಬಂಧಿಕರು ಬೆಳಗಾವಿಯ ಮೂನ್ ಆಸ್ಪತ್ರೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಸೋಂಕಿತ ವ್ಯಕ್ತಿ ಸಾವು; ಆಸ್ಪತ್ರೆಗೆ ಕಲ್ಲು ತೂರಿ ಸಂಬಂಧಿಕರ ಆಕ್ರೋಶ - moon hospital
ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಕೊರೆತೆಯಿಂದ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟ ಹಿನ್ನಲೆ ಮೃತನ ಸಂಬಂಧಿಕರು ಆಸ್ಪತ್ರೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬೆಳಗಾವಿ ನಗರದ ಟಿಳಕವಾಡಿಯಲ್ಲಿರುವ ಮೂನ್ ಆಸ್ಪತ್ರೆಯ ಗಾಜುಗಳು ಘಟನೆಯಲ್ಲಿ ಪುಡಿಪುಡಿ ಆಗಿವೆ. ನಗರದ ಅನಗೋಳದ 57 ವರ್ಷದ ವ್ಯಕ್ತಿ ತೀವ್ರ ಅಸ್ವಸ್ಥಗೊಂಡು ನಿನ್ನೆ ಸಂಜೆ ಮೂನ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವನ್ನಪ್ಪಿದ್ದರು. ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಕೊರತೆಯೇ ಸೋಂಕಿತ ವ್ಯಕ್ತಿಯ ಸಾವಿಗೆ ಪ್ರಮುಖ ಕಾರಣ ಎಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ.
ಘಟನೆ ಬಳಿಕ ಆಸ್ಪತ್ರೆಗೆ ಆಕ್ಸಿಜನ್ ಸಿಲಿಂಡರ್ ತರಲಾಗಿದೆ ಎಂದು ಸಂಬಂಧಿಕರು ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೇ ಮೂನ್ ಆಸ್ಪತ್ರೆಯ ವೈದ್ಯರ ಜತೆ ಮೃತನ ಸಂಬಂಧಿಕರ ವಾಗ್ವಾದ ನಡೆಸಿದ್ದಾರೆ. ಟಿಳಕವಾಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.