ಚಿಕ್ಕೋಡಿ:ಸರ್ಕಾರ ಸ್ವಾಬ್ ಟೆಸ್ಟಿಂಗ್ ಟಾರ್ಗೆಟ್ ನೀಡಿರುವುದು ಹಾಗೂ ಮನೆಗಳಿಗೆ ತೆರಳಿ ಕೊರೊನಾ ಪರೀಕ್ಷೆ ಮಾಡುತ್ತಿರುವುದನ್ನು ಕೈ ಬಿಡಬೇಕು. ಸ್ವ ಇಚ್ಛೆಯಿಂದ ಬಂದವರಿಗೆ ಮಾತ್ರ ಪರೀಕ್ಷೆಗೆ ಒಳಪಡಿಸಬೇಕು ಎಂದು ಹುಕ್ಕೇರಿ ಶಾಸಕ ಉಮೇಶ ಕತ್ತಿ ಸರ್ಕಾರಕ್ಕೆ ಒತ್ತಾಯಿಸಿದರು.
ಮನೆಗಳಿಗೆ ತೆರಳಿ ಕೊರೊನಾ ಪರೀಕ್ಷೆ ಕೈಬಿಡಿ: ಶಾಸಕ ಉಮೇಶ ಕತ್ತಿ - mla umesh katti press meet
ಮನೆಗಳಿಗೆ ತೆರಳಿ ಕೊರೊನಾ ಪರೀಕ್ಷೆ ಮಾಡುತ್ತಿರುವುದನ್ನು ಸರ್ಕಾರ ನಿಲ್ಲಿಸಬೇಕು. ಇದರಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ ಎಂದು ಶಾಸಕ ಉಮೇಶ ಕತ್ತಿ ಮನವಿ ಮಾಡಿದರು.
ಶಾಸಕ ಉಮೇಶ ಕತ್ತಿ
ಈ ಕೊರೊನಾ ಪರೀಕ್ಷೆಗಳಿಂದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ. ಕೆಲವರು ಮನೆಗಳನ್ನು ಬಿಟ್ಟು ಹೋಗುತ್ತಿದ್ದಾರೆ. ಸರ್ಕಾರದ ಆದೇಶದಿಂದ ಹಿರಿಯ ಅಧಿಕಾರಿಗಳು ಆರೋಗ್ಯ ಇಲಾಖೆಯ ಸಿಬ್ಬಂದಿ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸರ್ಕಾರ ತಕ್ಷಣ ಈ ಆದೇಶವನ್ನು ಕೈ ಬಿಡಬೇಕು ಎಂದು ಹೇಳಿದರು.