ಅಥಣಿ :ನಗರದಲ್ಲಿ ಲಾಕ್ಡೌನ್ ಸಡಿಲಿಕೆ ಆದರೂ ಕೂಡ ತರಕಾರಿ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಮತ್ತು ಅನುಮತಿಗೆ ಆಗ್ರಹಿಸಿ ವ್ಯಾಪಾರಸ್ಥರು ವಿವಿಧ ಇಲಾಖೆಯ ಅಧಿಕಾರಿಗಳ ಸಹಕಾರ ಕೋರಿ ಮನವಿ ಸಲ್ಲಿಸಿದರು.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಜನಜಂಗುಳಿಯಿದ್ದ ಕಾರಣಕ್ಕೆ ಬೀದಿಬದಿ ತರಕಾರಿ ವ್ಯಾಪಾರಸ್ಥರನ್ನು ಶಂಕರನಗರಕ್ಕೆ ಸ್ಥಳಾಂತರ ಮಾಡಲಾಗಿತ್ತು. ಕೇಂದ್ರ ಸರ್ಕಾರದಿಂದ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ಇದರ ಪರಿಣಾಮವಾಗಿ ಮೊದಲಿನಂತೆ ನಮಗೆ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ಅನುವು ಮಾಡಿಕೊಡಿ ಎಂದು ತಹಶೀಲ್ದಾರ್ ದುಂಡಪ್ಪ ಕೋಮಾರ ಅವರಿಗೆ ವ್ಯಾಪಾರಸ್ಥರು ಮನವಿ ಸಲ್ಲಿಸಿದರು.