ಚಿಕ್ಕೋಡಿ (ಬೆಳಗಾವಿ): ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಯಭಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆ. ಮಾರುತಿ ಚಿದಾನಂದ ನಾವ್ಹಿ (22) ಸಾವಿಗೀಡಾದ ವಿದ್ಯಾರ್ಥಿ.
ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ಕಲಿಕೆಯ ಒತ್ತಡ ಉಲ್ಲೇಖ - ಈಟಿವಿ ಭಾರತ ಕನ್ನಡ
ಬಿಎಸ್ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಯಲ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆ.
ಕಲಿಕೆಯ ಒತ್ತಡ ತಾಳಲಾರದೇ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಖಾಸಗಿ ಕಾಲೇಜುಗಳಲ್ಲಿ ಈತ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದನು. ಕಲಿಕೆಯ ಒತ್ತಡದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟಿನಲ್ಲಿ ಬರೆದಿದ್ದಾನೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:WBSSC ನೇಮಕಾತಿ ಹಗರಣ: ಬಂಗಾಳದ ಶಿಕ್ಷಕಿ ಆತ್ಮಹತ್ಯೆ
Last Updated : Dec 5, 2022, 10:59 PM IST