ಕರ್ನಾಟಕ

karnataka

ETV Bharat / state

ಮಹದಾಯಿ ಯೋಜನೆ ಜಾರಿಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ : ಸಿಎಂ ಬೊಮ್ಮಾಯಿಗೆ ಎನ್ ಹೆಚ್‌ ಕೋನರೆಡ್ಡಿ ಆಗ್ರಹ - ಸಿಎಂ ಬೊಮ್ಮಾಯಿ

ಲೋಕಸಭೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹದಾಯಿ ಯೋಜನೆ ಬಗ್ಗೆ ಪ್ರಶ್ನಿಸಿದ್ದರು. ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿಗಾಗಿ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಕೇಂದ್ರ ಸರ್ಕಾರ ಉತ್ತರಿಸಿದೆ. ಹೀಗಾಗಿ, ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು..

submit-a-proposal-to-the-center-for-implementation-of-the-mahadayi-plan-says-konareddy
ಕೋನರೆಡ್ಡಿ ಆಗ್ರಹ

By

Published : Aug 4, 2021, 8:15 PM IST

ಬೆಳಗಾವಿ :ಮಹದಾಯಿ ಯೋಜನೆ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿಗೆ ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ ಆಗ್ರಹಿಸಿದ್ದಾರೆ. ಮಹದಾಯಿ ಯೋಜನೆ ಜಾರಿ ಹೋರಾಟದ ಸಂಬಂಧ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆ ಜಾರಿಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದಿದ್ದಾರೆ.

ಮಹಾದಾಯಿ ಯೋಜನೆ ಜಾರಿಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ : ಸಿಎಂ ಬೊಮ್ಮಾಯಿಗೆ ಕೋನರೆಡ್ಡಿ ಆಗ್ರಹ

ಈ ಹಿಂದೆ ಮಹದಾಯಿ ಯೋಜನೆ ಜಾರಿಗಾಗಿ ಪಾದಯಾತ್ರೆ ಹಾಗೂ ಹೋರಾಟ ಮಾಡಿದ್ದ ಬಸವರಾಜ್ ಬೊಮ್ಮಾಯಿ ಅವರೇ ಇಂದು ಸಿಎಂ ಆಗಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಗೆ ಮಹದಾಯಿ ವಿವಾದ ಬಗ್ಗೆ ಅಪಾರ ಜ್ಞಾನವಿದೆ. ಅಲ್ಲದೇ ನರಗುಂದ, ನವಲಗುಂದ ಶಾಸಕರಿಬ್ಬರೂ ಸಚಿವರಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಉತ್ತರ ಕರ್ನಾಟಕ ಭಾಗಕ್ಕೆ ನಿರಂತರವಾಗಿ ಅನ್ಯಾಯ ಆಗುತ್ತಿದೆ ಎಂದರು.

ಲೋಕಸಭೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹದಾಯಿ ಯೋಜನೆ ಬಗ್ಗೆ ಪ್ರಶ್ನಿಸಿದ್ದರು. ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿಗಾಗಿ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಕೇಂದ್ರ ಸರ್ಕಾರ ಉತ್ತರಿಸಿದೆ. ಹೀಗಾಗಿ, ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ 371(ಜೆ) ಅಡಿ ವಿಶೇಷ ಪ್ರಾತಿನಿಧ್ಯ ನೀಡಲಾಗಿದೆ. ಅದೇ ರೀತಿ ಮುಂಬೈ ಕರ್ನಾಟಕಕ್ಕೂ ಪ್ರಾತಿನಿಧ್ಯ ನೀಡಬೇಕು. ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿ ಹೆಚ್ಚಾಗಿದೆ. ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಓದಿ:Corona ವೈರಸ್ ನಡುವೆ‌ ಇತರ ಸಾಂಕ್ರಾಮಿಕ ರೋಗದ ಹಾವಳಿ ಹೇಗಿದೆ ಗೊತ್ತಾ?

ABOUT THE AUTHOR

...view details