ಬೆಳಗಾವಿ:ಇಲ್ಲಿನ ಮಹಾಂತೇಶ ನಗರದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರ ಪಾಸಿಂಗ್ ಹೊಂದಿದ ಗೂಡ್ಸ್ ವಾಹನದ ಮೇಲೆ ಕರವೇ ಕಾರ್ಯಕರ್ತರು ಏಕಾಏಕಿ ದಾಳಿ ನಡೆಸಿದ್ದಾರೆ. ಅಲ್ಲದೇ ವಾಹನದ ಗಾಜು ಒಡೆಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆಯಿತು.
ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಗಳ ಮೇಲೆ ಕಲ್ಲು ತೂರಾಟ ಮಾಡಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕರವೇ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹಾಗೂ ಡಿಸಿಎಂ ದೇವೇಂದ್ರ ಫಡ್ನವಿಸ್ ಪ್ರತಿಕೃತಿ ದಹನ ಮಾಡಿದರು.