ಚಿಕ್ಕೋಡಿ:ಮಾನಸಿಕ ಅಸ್ವಸ್ಥನೊರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೇಡಕಿಹಾಳ ಗ್ರಾಮದಲ್ಲಿ ನಡೆದಿದೆ.
ಮಾನಸಿಕ ಒತ್ತಡಕ್ಕೆ ಸಿಲುಕಿ ವ್ಯಕ್ತಿ ನೇಣಿಗೆ ಶರಣು - ಯುವಕ ನೇಣಿಗೆ ಶರಣು
ಮಾನಸಿಕ ಅಸ್ವಸ್ಥನೊರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೇಡಕಿಹಾಳ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ
ಬೇಡಕಿಹಾಳ ಗ್ರಾಮದ ಅಜೀತ ಮಲ್ಲಪ್ಪ ಶೆಟ್ಟಿ (45) ಮೃತ ವ್ಯಕ್ತಿಯಾಗಿದ್ದು, ಪತ್ನಿ ಜಗಳವಾಡಿ ಕಳೆದ ಎರಡು ವರ್ಷಗಳ ಹಿಂದೆ ಮಕ್ಕಳೊಂದಿಗೆ ತವರು ಮನೆಯಲ್ಲಿ ವಾಸವಾಗಿದ್ದಳು. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಅಜೀತ, ತನ್ನ ತಾಯಿ ಬೇರೆ ಊರಿಗೆ ಹೋದಾಗ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.