ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಮಾರಿಹಾಳ ಠಾಣೆಯ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ. ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.
ಮಾರಿಹಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಿ.ಎನ್. ಬಳಗಣ್ಣವರ ಮತ್ತು ಆರ್.ಎಸ್. ತಳೇವಾಡ ಎಂಬ ಕಾನ್ಸ್ಟೇಬಲ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಸುಳೇಭಾವಿ ಗ್ರಾಮದಲ್ಲಿ ಗುರುವಾರ ರಾತ್ರಿ ರಣಧೀರ್ ಅಲಿಯಾಸ್ ಮಹೇಶ ರಾಮಚಂದ್ರ ಮುರಾರಿ (26) ಹಾಗೂ ಪ್ರಕಾಶ ನಿಂಗಪ್ಪ ಹುಂಕರಿ ಪಾಟೀಲ(24) ಎಂಬ ಇಬ್ಬರು ಯುವಕರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.