ಕರ್ನಾಟಕ

karnataka

ETV Bharat / state

ರಾಹುಲ್‌ ಗಾಂಧಿಗೆ ಸಮನ್ಸ್‌ ನೀಡಿರುವುದು ರಾಜಕೀಯ ಪ್ರೇರಿತ: ಸತೀಶ್‌ ಜಾರಕಿಹೊಳಿ - Satish Zarakiholi speaking at the Hill Garden office in Gokaka

ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್​​ಗಳಿದ್ದು, ಅವುಗಳನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿಲ್ಲ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

Satish Zarakiholi speaking at the Hill Garden office in Gokaka
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

By

Published : Jun 16, 2022, 3:15 PM IST

ಬೆಳಗಾವಿ:ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಇಡಿ ಸಮನ್ಸ್‌ ನೀಡಿರುವುದು ರಾಜಕೀಯ ಪ್ರೇರಿತ. ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ. ಆದರೆ, ಉದ್ದೇಶಪೂರ್ವಕವಾಗಿ ರಾಹುಲ್‌ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ. ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್​​ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ ಸರ್ಕಾರ ಪರಿಗಣಿಸುತ್ತಿಲ್ಲ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ದೂರಿದರು.


ಗೋಕಾಕ ನಗರದ ಹಿಲ್ ಗಾರ್ಡನ್‌ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್‌ ನಾಯಕರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ಬಿಜೆಪಿಯವರು ಎಷ್ಟೇ ಹೆದರಿಸಲು ಪ್ರಯತ್ನಪಟ್ಟರೂ ನಾವು ಅದಕ್ಕೆ ಹೆದರುವುದಿಲ್ಲ. ಎಲ್ಲಾ ಸಮಸ್ಯೆಗಳಿಗೆ ಕಾನೂನಿನ ಮೂಲಕ ಹೋರಾಟ ಮಾಡುತ್ತೇವೆ ಎಂದರು.

ಕಾಂಗ್ರೆಸ್​ಗೆ ಗೆಲುವು:ವಾಯುವ್ಯ ಶಿಕ್ಷಕರ ಮತಕ್ಷೇತ್ರದಿಂದ ಪ್ರಕಾಶ್‌ ಹುಕ್ಕೇರಿಯವರು ಗೆಲುವು ಸಾಧಿಸಿದ್ದರಿಂದ ಕಾಂಗ್ರೆಸ್‌ಗೆ ಜಿಲ್ಲೆಯಲ್ಲಿ ಇನ್ನಷ್ಟು ಶಕ್ತಿ ಬಂದಿದೆ. ಗೆಲುವಿಗೆ ಪ್ರಕಾಶ್‌ ಹುಕ್ಕೇರಿಯವರ ಪ್ರಯತ್ನವೂ ಇದೆ. ಚುನಾವಣೆಯಲ್ಲಿ ದುಡ್ಡು ಹಂಚುವ ವಿಷಯಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ದುಡ್ಡಿನ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ:ರಾಜಭವನ ಮುತ್ತಿಗೆ ಯತ್ನ: ಸಿದ್ದರಾಮಯ್ಯ, ಡಿಕೆಶಿ ಸೇರಿ ಕೈ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

For All Latest Updates

TAGGED:

ABOUT THE AUTHOR

...view details