ಬೆಳಗಾವಿ: ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ನೀಡುವ ಕುರಿತಂತೆ ನಾಳೆ ಸಿಎಂ ಬಿಎಸ್ವೈ ಅವರೊಂದಿಗೆ ಪಕ್ಷಾತೀತವಾಗಿ ಚರ್ಚಿಸಿ ಅನುಷ್ಠಾನಕ್ಕೆ ತರಲು ಶ್ರಮಿಸಲಾಗುವುದು ಎಂದು ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದ ಪರವಾಗಿ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ, ಚುನಾವಣೆ ನೀತಿ ಸಂಹಿತೆ ಇರುವ ಕಾರಣ ಸರ್ಕಾರದ ಪರವಾಗಿ ಏನು ಘೋಷಣೆ ಮಾಡಲು ಸಾಧ್ಯವಿಲ್ಲ. ಆದರೆ, ಲಿಂಗಾಯತ ಪಂಚಮಸಾಲಿ ಹೋರಾಟದ ಪರವಾಗಿ ಸರ್ಕಾರವಿದೆ. ನಾನು ಕೂಡ ಈ ಭಾಗದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಆಗುಹೋಗುಗಳ ಜೊತೆಗೆ ನಿಂತಿದ್ದೇನೆ. ಈಗಲೂ ಸಮಾಜದ ಬೆಂಬಲಕ್ಕೆ ಇದ್ದೇನೆ. ಇಂದು ಬೆಂಗಳೂರಿಗೆ ಹೋಗುತ್ತಿದ್ದೇನೆ. ಸಿಎಂ ಬಿಎಸ್ವೈ ಅವರನ್ನು ಭೇಟಿಯಾಗಿ ಆದಷ್ಟು ಬೇಗ 2ಎ ಮೀಸಲಾತಿ ಅನುಷ್ಠಾನಕ್ಕೆ ಶ್ರಮಿಸಲಾಗುವುದು ಎಂದರು.