ಬೆಳಗಾವಿ: ಕೊರೊನಾಗೆ ತುತ್ತಾಗಿ ಚಿಕಿತ್ಸೆ ಫಲಿಸದೆ ವಿಧಿವಶರಾದ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ದೆಹಲಿಯಲ್ಲಿ ನಡೆಯಿತು. ಅಂತ್ಯಸಂಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಂಗಡಿ ಕುಟುಂಬ ಸದಸ್ಯರು ಇಂದು ಬೆಳಗ್ಗೆ ದೆಹಲಿಯಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಸುರೇಶ್ ಅಂಗಡಿ ಪತ್ನಿ ಮಂಗಳಾ, ಪುತ್ರಿಯರಾದ ಸ್ಫೂರ್ತಿ, ಶ್ರದ್ಧಾ, ಇಬ್ಬರು ಅಳಿಯಂದಿರು ಹಾಗೂ ಬೀಗರು ಆಗಿರುವ ಸಚಿವ ಜಗದೀಶ್ ಶೆಟ್ಟರ್ ದಂಪತಿ ದೆಹಲಿಯಿಂದ ಬೆಳಗಾವಿಗೆ ಹಿಂದಿರುಗಿದರು. ಸುರೇಶ್ ಅಂಗಡಿ ನೆನೆದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕುಟುಂಬ ಸದಸ್ಯರು, ಸಂಬಂಧಿಕರು ಕಣ್ಣೀರು ಹಾಕಿದರು.