ಬೆಳಗಾವಿ: ಕೋವಿಡ್ ರೂಪಾಂತರಿ ತಳಿ'ಒಮಿಕ್ರೋನ್' ರಾಜ್ಯದ ಆತಂಕಕ್ಕೆ ಕಾರಣವಾಗಿದ್ದು, ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಬೆಳಗಾವಿ ಡಿಸಿ ವೆಂಕಟೇಶ ಕುಮಾರ್ ಸೂಚಿಸಿದ್ದಾರೆ.
ಬೆಳಗಾವಿ ಜಿಲ್ಲೆಯ 23 ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ನಿಗಾ ಇಡುವಂತೆ ಡಿಸಿ ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ವರದಿ ಕಡ್ಡಾಯಗೊಳಿಸಲಾಗಿದೆ. ಧಾರವಾಡ ಎಸ್‌ಡಿಎಂ ಕಾಲೇಜಿನಲ್ಲಿ ಹೆಚ್ಚಿನ ಕೋವಿಡ್ ಸೋಂಕು ಪತ್ತೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳು ಮುನ್ನೆಚ್ಚರಿಕೆ ವಹಿಸುವಂತೆ ಡಿಸಿ ನಿರ್ದೇಶನ ನೀಡಿದ್ದಾರೆ.