ಬೆಳಗಾವಿ: ಬೆಂಗಳೂರಿನಲ್ಲಿ ಹತ್ತು ಹೊಸ ಕೋವಿಡ್ ಸೆಂಟರ್ ತೆರೆಯಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಹತ್ತು ಹೊಸ ಕೋವಿಡ್ ಸೆಂಟರ್ನಲ್ಲಿ ಸುಮಾರು 1500 ಬೆಡ್ ವ್ಯವಸ್ಥೆ ಮಾಡುತ್ತಿದ್ದೇವೆ. ಆದರೆ, ಕೊರೊನಾ ಸೋಂಕು ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿದರು ಲೋಕಸಭೆ ಉಪಚುನಾವಣೆ ಪ್ರಚಾರಾರ್ಥ ಇವತ್ತು ಗೋಕಾಕ್, ಅರಭಾವಿಗೆ ಹೊರಟಿದ್ದೇನೆ. ಇದಕ್ಕೆ ಜಾರಕಿಹೊಳಿ ಬ್ರದರ್ಸ್ ಸಹಕಾರ ಕೊಡ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಕೊರೊನಾ ಟಫ್ ರೂಲ್ಸ್ ಬಗ್ಗೆ ಸರ್ವಪಕ್ಷ ಸಭೆಯ ಬಳಿಕವಷ್ಟೇ ತೀರ್ಮಾನಿಸುತ್ತೇವೆ. ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಲಹೆ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ.
ಓದಿ:ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅಭಿವೃದ್ಧಿ ಕೆಲಸಗಳನ್ನು ಗುರುತಿಸಿ, ಕಾಂಗ್ರೆಸ್ಗೆ ಮತ ನೀಡಿ: ಸತೀಶ್ ಜಾರಕಿಹೊಳಿ