ಅಥಣಿ: ಕ್ಷೇತ್ರದ ಮತದಾನ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಅಂತ್ಯಗೊಂಡಿದೆ. ಒಟ್ಟು 79.57ರಷ್ಟು ಮತದಾನವಾಗಿದೆ ಎಂದು ತಿಳಿದು ಬಂದಿದೆ.
ಉಪ ಕದನ: ಅಥಣಿಯಲ್ಲಿ ಶಾಂತಿಯುತವಾಗಿ ಮುಗಿದ ಮತದಾನ - athani latest news
ಅಥಣಿ ವಿಧಾನಸಭಾ ಕ್ಷೇತ್ರದ ಮತದಾನ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಅಂತ್ಯಗೊಂಡಿದೆ. ಒಟ್ಟು 79.57ರಷ್ಟು ಮತದಾನವಾಗಿದೆ ಎಂದು ತಿಳಿದು ಬಂದಿದೆ.
ಮೊದಲು ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ತಮ್ಮ ಕುಟುಂಬದ ಸದಸ್ಯರ ಜೊತೆಗೂಡಿ ತಮ್ಮ ಹಕ್ಕು ಚಲಾಯಿಸಿದರು. ಬಳಿಕ ಅಥಣಿ-ಕಾಗವಾಡ ಗೆಲುವು ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಅಥಣಿ ಪಟ್ಟಣದ ಬಸ್ ನಿಲ್ದಾಣದ ಎದುರಿನ ಸರ್ಕಾರಿ ಕನ್ನಡ ಶಾಲೆಯಲ್ಲಿ ಮತ ಚಲಾವಣೆ ಮಾಡಿದ ಗಜಾನನ ಮಂಗಸೂಳಿ ಕೂಡಾ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆಯಾಗಿ ಅಥಣಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ನಡೆಯಿತು. ಇವಿಎಂ ಮಷಿನ್ ಸಮಸ್ಯೆಯಿಂದಾಗಿ 10ರಿಂದ 15 ನಿಮಿಷದ ತೊಂದರೆ ಬಿಟ್ಟರೆ ಯಾವುದೇ ರೀತಿಯ ಸಮಸ್ಯೆಗಳು ಕಾಣಿಸಿಲ್ಲ. 9ರಂದು ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.