ಚಿಕ್ಕೋಡಿ:ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಇಂಗಳಿ ಮತ್ತು ಶಮನೇವಾಡಿ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ, ಚುನಾವಣಾ ಗುರುತಿನ ಚೀಟಿ ಹಾಗೂ ಇನ್ನಿತರ ಚುನಾವಣೆ ಸಂಬಂಧಪಟ್ಟ ಚಟುವಟಿಕೆಗಳನ್ನು ಪರಿಶೀಲಿಸಿದರು.
ಚಿಕ್ಕೋಡಿ ಬಳಿಯ ಗ್ರಾಮಗಳಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ದಿಢೀರ್ ಭೇಟಿ - Chief Electoral Officer of Karnataka State Sanjeev Kumar
ಇಂಗಳಿ ಮತ್ತು ಶಮನೇವಾಡಿ ಗ್ರಾಮಕ್ಕೆ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂಗಳಿ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ
ಈ ವೇಳೆ ಮಾತನಾಡಿದ ಅವರು, ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಅಧಿಕಾರಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು ಹಾಗೂ ಬಿಎಲ್ಓಗಳು ಚುನಾವಣಾ ಸಂಬಂಧಪಟ್ಟ ಎಲ್ಲ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಈ ವೇಳೆ ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ.ರಾಜೇಂದ್ರ, ಚಿಕ್ಕೋಡಿ ಉಪವಿಭಾಗ ಅಧಿಕಾರಿ ರವೀಂದ್ರ ಕರಲಿಂಗಣವರ್, ಚಿಕ್ಕೋಡಿ ತಹಶೀಲ್ದಾರ್ ಸುಭಾಷ ಸಂಪಗಾವಿ ಹಾಜರಿದ್ದರು.