ಚಿಕ್ಕೋಡಿ:ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದಿದೆ. ಅದೃಷ್ಟಾವಶಾತ್ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಮೂಡಲಗಿ ಪಟ್ಟಣದ ಬಸಪ್ಪ ತಳವಾರ ಎಂಬುವರ ಮನೆ ಸಂಪೂರ್ಣ ಕುಸಿದಿದೆ.
ಮೂಡಲಗಿಯಲ್ಲಿ ಮನೆ ಕುಸಿತ: ಪುರಸಭೆ ಸದಸ್ಯನಿಂದ ಪರಿಹಾರ ಭರವಸೆ
ಮೂಡಲಗಿ ಪಟ್ಟಣದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದಿದ್ದು, ಅದೃಷ್ಟಾವಶಾತ್ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಕುಸಿದಿರುವುದು.
ಸ್ಥಳಕ್ಕೆ ಪುರಸಭೆ ಸದಸ್ಯ ಶಿವಪ್ಪ ಚಂಡಕಿ ಮತ್ತು ಮರೆಪ್ಪಗೋಳ ಭೇಟಿ ನೀಡಿ ಆಹಾರ ಪದಾರ್ಥಗಳನ್ನು ವಿತರಿಸಿದರು. ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪುರಸಭೆಯಿಂದ ಆಶ್ರಯ ಯೋಜನೆಯಲ್ಲಿ ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಹಳೆಯ ಮಣ್ಣಿನ ಮನೆಗಳಿರುವ ಸಾರ್ವಜನಿಕರು ಅದಷ್ಟು ಮುಂಜಾಗ್ರತೆ ವಹಿಸಿ, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮನವರಿಕೆ ಸಲಹೆ ನೀಡಿದರು.
ಚಿಕ್ಕೋಡಿ ತಾಲೂಕಿನ ನದಿ ತೀರದ ಜನರಿಗೆ ಹಾಗೂ ದನಕರುಗಳನ್ನು ಸಾಗಿಸಲು ಶಾಸಕ ಗಣೇಶ್ ಹುಕ್ಕೇರಿ ಅವರು 300 ವಾಹನಗಳ ವ್ಯವಸ್ಥೆ ಮಾಡಿದ್ದಾರೆ. ನದಿ ತೀರದ ಯಡೂರ, ಕಲ್ಲೋಳ, ಮಾಂಜರಿ, ಇಂಗಳಿ, ಚಂದೂರ ಗ್ರಾಮಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ. ನಂತರ ಪ್ರವಾಹ ಸಂತ್ರಸ್ತರಿಗೆ ಸುರಕ್ಷಿತ ಸ್ಥಳಗಳಿಗೆ ತೆರುಳುವಂತೆ ಮನವಿ ಮಾಡಿದ್ದಾರೆ ಎಂದು ಯಡೂರ ಗ್ರಾಮದ ಸಂತೋಷ ಮಠಪತಿ ಹೇಳಿದರು.