ಕರ್ನಾಟಕ

karnataka

ETV Bharat / state

ಹದಗೆಟ್ಟ ರಸ್ತೆ: ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ - Athani Latest News

ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಈ ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ್ದು, ಗ್ರಾಮಸ್ಥರು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

The Deteriorated road villagers demand that the road be built
ರಸ್ತೆ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ

By

Published : Sep 30, 2020, 11:27 AM IST

ಅಥಣಿ:ತಾಲೂಕಿನ ನಂದೇಶ್ವರ ಗ್ರಾಮದ ಬಾರಿಗಡ್ಡೆ ತೋಟದ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ನಿರ್ಮಾಣಕ್ಕೆ ಗ್ರಾಮಸ್ಥರ ಆಗ್ರಹ

ತಾಲೂಕಿನ ನದಿ ತೀರದಲ್ಲಿರುವ ನಂದೇಶ್ವರ ಗ್ರಾಮದ ಬಾರಿಗಡ್ಡೆ ತೋಟದಲ್ಲಿ ಸುಮಾರು ಒಂದು ನೂರಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿದ್ದು, ಸರಿಯಾದ ರಸ್ತೆ ಇಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ. ಮಕ್ಕಳು ಇದೆ ರಸ್ತೆಯಿಂದ ಶಾಲೆಗೆ ನಡೆದುಕೊಂಡು ಹೋಗುವುದರಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.

ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಈ ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ್ದು, ಗ್ರಾಮಸ್ಥರು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಗ್ರಾಮದಲ್ಲಿ ಕುಡಿಯುವ ನೀರು, ವಿದ್ಯುತ್ ಸಮಸ್ಯೆಯಿಂದಾಗಿ ದಿನನಿತ್ಯ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ABOUT THE AUTHOR

...view details