ಚಿಕ್ಕೋಡಿ: ಕೋವಿಡ್-19ಕ್ಕೆ ಮುಂದುವರೆದ ಚೀನಾ, ಇಟಲಿ, ಅಮೆರಿಕಾದಂತಹ ದೇಶಗಳು ತತ್ತರಿಸಿವೆ. ಹೀಗಾಗಿ ಕೊರೊನಾ ತಡೆಗಟ್ಟುವ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಲಾಕ್ಡೌನ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಕೊರೊನಾ ಸೋಂಕಿತನನ್ನು ಟ್ರೀಟ್ ಮಾಡುತ್ತಿರುವವರ ಶ್ರಮ ಬಹಳ ದೊಡ್ಡದು ಅಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಸೋಂಕಿತರಿಗೆ ಚಿಕಿತ್ಸೆ ನೀಡುವವರ ಶ್ರಮ ಬಹಳ ದೊಡ್ಡದು: ಶಶಿಕಲಾ ಜೊಲ್ಲೆ - ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ
ಚಿಕ್ಕೋಡಿ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ 527 ಜನರ ಮೇಲೆ ನಿಗಾ ವಹಿಸಲಾಗಿದೆ.14 ಜನ ಕ್ವಾರಂಟೈನ್ ಮುಕ್ತವಾಗಿದ್ದಾರೆ. 6 ಜನರನ್ನು ಆಸ್ಪತ್ರೆಯಲ್ಲಿ ಇಡಲಾಗಿದೆ. 263 ಜನ ಈಗ 14 ದಿನ ಪೂರ್ತಿ ಮಾಡಿ ಯಶಸ್ವಿಯಾಗಿ ಹೊರ ಬಂದಿದ್ದಾರೆ. ಇವರಿಗೆ ಚಿಕಿತ್ಸೆ ನೀಡಿದ ವೈದ್ಯರ ಶ್ರಮ ಬಹಳ ದೊಡ್ಡದು ಹಾಗೂ ಆರೋಗ್ಯ ಹಾಗೂ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಏಪ್ರಿಲ್-5 ಭಾನುವಾರ ರಾತ್ರಿ 9 ಗಂಟೆಗೆ ನಾವೆಲ್ಲರೂ ಒಂದೇ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸಾರಲು ಬೆಳಕಿನ ಕ್ರಾಂತಿ ಮಾಡಬೇಕಾಗಿದೆ. ಹೋಮ್ ಕ್ವಾರಂಟೈನ್ನಲ್ಲಿರುವವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಾಗಿದೆ. ಎಲ್ಲರೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ನಮಗೆ ಎಚ್ಚರಿಕೆಯ ಗಂಟೆಯಾಗಲಿದೆ.
ಬೆಂಗಳೂರಿನ ಆಶಾ ಕಾರ್ಯಕರ್ತೆ ಕೃಷ್ಣ ವೇಣಿ ಹಲ್ಲೆ ಖಂಡನೀಯ. ಇಂತಹ ಘಟನೆಗಳು ಮರುಕಳಿಸದಿರಲಿ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ನಮಗೋಸ್ಕರ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಣೆ ಮಾಡುತಿದ್ದಾರೆ. ಅವರಿಗೂ ಕುಟುಂಬವಿದೆ ಆದರೂ ಸರ್ಕಾರದ ಆದೇಶದ ಮೇರೆಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂದಿದ್ದಾರೆ.