ಚಿಕ್ಕೋಡಿ:ಅನಾರೋಗ್ಯದಿಂದ ಮೃತಪಟ್ಟ ತವರಿಗೆ ಆಗಮಿಸಿದ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ಯೋಧ ಸುನಿಲ್ ಖಿಲಾರೆ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ನಡೆಯಿತು.
ಸಕಲ ಸರ್ಕಾರಿ ಗೌರವದೊಂದಿಗೆ ಯೋಧ ಸುನಿಲ್ ಅಂತ್ಯಕ್ರಿಯೆ - ಬೆಳಗಾವಿ ಸುದ್ದಿ
ಅಸ್ಸೋಂ ಗಡಿಯಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೇಳೆ ತೀವ್ರ ಹೊಟ್ಟೆನೋವಿನಿಂದಾಗಿ ಸುನಿಲ್ ಗುಹವಾಟಿಯ ಆರ್ಮಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಜುಲೈ 1ರಂದು ಮೃತರಾಗಿದ್ದಾರೆ. ಅವರ ಪಾರ್ಥಿವ ಶರೀರ ಇಂದು ತವರಿಗೆ ಆಗಮಿಸಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ಸ್ವಗ್ರಾಮದಲ್ಲಿ ನಡೆಯಿತು.
ಅಸ್ಸೋಂ ಗಡಿಯಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೇಳೆ ತೀವ್ರ ಹೊಟ್ಟೆನೋವಿನಿಂದಾಗಿ ಸುನೀಲ್ ಗುಹವಾಟಿಯ ಆರ್ಮಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಜುಲೈ 1ರಂದು ಮೃತರಾಗಿದ್ದಾರೆ. ವೀರಯೋಧ ಸುನಿಲ್, ಕಳೆದ 17 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮೃತ ಯೋಧನ ಪಾರ್ಥಿವ ಶರೀರ ಇಂದು ಮಂಗಸೂಳಿ ಗ್ರಾಮಕ್ಕೆ ಆಗಮಿಸಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಸುನಿಲ್ ಅಂತ್ಯಕ್ರಿಯೆ ನೆರವೇರಿತು. ಯೋಧನ ತಂದೆ ಹಾಗೂ ಅಣ್ಣ ಕೂಡಾ ಸೈನಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುನಿಲ್ ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.