ಚಿಕ್ಕೋಡಿ (ಬೆಳಗಾವಿ): ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಂಡ - ಹೆಂಡತಿ ಜಗಳ ವಿಕೋಪಕ್ಕೆ ತಿರುಗಿದ್ದು, ಹೆಂಡತಿ ಹೊಟ್ಟೆಗೆ ಗಂಡ ಚೂರಿ ಹಾಕಿದ್ದಾನೆ. ಬಳಿಕ ಇದರಿಂದ ಭಯಗೊಂಡ ಆತ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಪ್ಪಲಗುದ್ದಿ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ನಿವಾಸಿ ಪ್ರಭು ರಾಮಪ್ಪ ಮೇತ್ರಿ (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಪ್ರಭು ರಾಮಪ್ಪ ಮತ್ತು ಆತನ ಹೆಂಡತಿ ಪಾರ್ವತಿ ಮಧ್ಯೆ ಆಗಾಗ ಸಣ್ಣಪುಟ್ಟ ಜಗಳ ನಡೆಯುತ್ತಿತ್ತು. ಸೋಮವಾರ ನಡೆದ ಜಗಳವು ವಿಕೋಪಕ್ಕೆ ಹೋದ ಕಾರಣ ಪತ್ನಿ ಪಾರ್ವತಿ ಮೇತ್ರಿ ಹೊಟ್ಟೆಗೆ ಗಂಡ ಪ್ರಭು ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ.