ಅಥಣಿ: ಇದೇ 9 ರಂದು ಬಿಜೆಪಿ ಸರ್ಕಾರ ಪತನ ಆಗುತ್ತೆ. ಮಹಾರಾಷ್ಟ್ರದ ಬಿಜೆಪಿ ಸರ್ಕಾರಕ್ಕೆ ಆದ ಪರಿಣಾಮ ಕರ್ನಾಟಕದಲ್ಲೂ ಆಗುತ್ತೆ ಎಂದು ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಎಂಬಿ ಪಾಟೀಲ್ ಭವಿಷ್ಯ ನುಡಿದಿದ್ದಾರೆ.
ಅಥಣಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ, ಕೈ ಅಭ್ಯರ್ಥಿ ಗಜಾನನ ಮಂಗಸೂಳಿ ಪರವಾಗಿ ತಾಲೂಕಿನ ಝುಂಜರವಾಡ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ದಲ್ಲಿ ಮಹೇಶ್ ಕುಮಟಳ್ಳಿಗೆ ಅಥಣಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ 1000ಕೋಟಿ ಅನುದಾನ ನೀಡಿದ್ದೇವೆ. ಆದರೆ ಆ ಮನುಷ್ಯ ಹೇಳುವುದು ಸುಳ್ಳು ಎಂದು ಬಿಜೆಪಿ ಅಭ್ಯರ್ಥಿ ವಿರುದ್ಧ ಆರೋಪ ಮಾಡಿದ್ದಾರೆ.