ಬೆಳಗಾವಿ:ಗೋ ಹತ್ಯೆ ನಿಷೇಧ ಹಾಗೂ ಲವ್ ಜಿಹಾದ್ ತಡೆ ಕಾನೂನು ಜಾರಿಗಾಗಿ ಇಂದಿನ ಕಾರ್ಯಕಾರಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು.
'ಲವ್ ಜಿಹಾದ್ ತಡೆ, ಗೋ ಹತ್ಯೆ ನಿಷೇಧ ಕಾನೂನು ಜಾರಿ ಮಾಡೇ ಮಾಡ್ತೀವಿ'- ಸವದಿ - ಬೆಳಗಾವಿಯಲ್ಲಿ ಸಭೆ ನಡೆಸಿದ ಡಿಸಿಎಂ
ಶಾಂತಿಯುತವಾಗಿ ಬಂದ್ ನಡೆಯುತ್ತಿದೆ. ಮರಾಠ ಸಮುದಾಯದ ಅನುಕೂಲಕ್ಕೆ ನಿಗಮ ಸ್ಥಾಪನೆ ಮಾಡಲಾಗಿದೆ. ಕಾರ್ಯಕಾರಿಣಿಯಲ್ಲಿ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಆಗಲ್ಲ. ಚುನಾವಣೆ ಘೋಷಣೆಯಾದ ಬಳಿಕ ಈ ಬಗ್ಗೆ ಚರ್ಚೆ ಆಗಲಿದೆ ಎಂದು ಸವದಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್, ಗೋ ಹತ್ಯೆ ನಿಷೇಧದ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಿದ್ದೇವೆ. ಇದೇ ಅಧಿವೇಶನ ಅಥವಾ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಆಗಲಿದೆ ಎಂದರು.
ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್ ವಿಚಾರಕ್ಕೆ ಪ್ರತಿಕ್ರಿಯೆ ನೀಡುತ್ತ, ಮರಾಠಿ, ಮರಾಠ ನಡುವಿನ ವ್ಯತ್ಯಾಸ ತಿಳಿಯಬೇಕು. ಬಂದ್ ಅಷ್ಟೊಂದು ಯಶಸ್ಸು ಕಂಡಿಲ್ಲ. ಬಂದ್ ಪ್ರತಿಷ್ಠೆಯ ಪ್ರಶ್ನೆ ಅಲ್ಲ. ಬಂದ್ ಮಾಡಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಶಾಂತಿಯುತವಾಗಿ ಬಂದ್ ನಡೆಯುತ್ತಿದೆ. ಮರಾಠ ಸಮುದಾಯದ ಅನುಕೂಲಕ್ಕೆ ನಿಗಮ ಸ್ಥಾಪನೆ ಮಾಡಲಾಗಿದೆ. ಕಾರ್ಯಕಾರಿಣಿಯಲ್ಲಿ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಆಗಲ್ಲ. ಚುನಾವಣೆ ಘೋಷಣೆಯಾದ ಬಳಿಕ ಈ ಬಗ್ಗೆ ಚರ್ಚೆ ಆಗಲಿದೆ ಎಂದು ಸವದಿ ಹೇಳಿದ್ದಾರೆ.