ಚಿಕ್ಕೋಡಿ/ ಧಾರವಾಡ/ ರಾಯಚೂರು/ ಬೀದರ್/ ಬೆಳಗಾವಿ: ರಾಜ್ಯದ ವಿವಿಧ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಆಯಾ ಕ್ಷೇತ್ರಗಳಲ್ಲಿ ಹಕ್ಕು ಚಲಾಯಿಸಿದರು. ಇವರೊಂದಿಗೆ ಕುಟುಂಬಸ್ಥರು ಹಾಗೂ ಪ್ರಮುಖ ನಾಯಕರೂ ಜೊತೆಗೂಡಿ ಮತ ಚಲಾಯಿಸಿದರು.
ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಕುಟುಂಬ ಸಮೇತ ಮತಗಟ್ಟೆಗೆ ಆಗಮಿಸಿ ಪತ್ನಿ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಇಬ್ಬರು ಪುತ್ರರೊಡನೆ ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಗ್ರಾಮದಲ್ಲಿ ಮತ ಚಲಾಯಿಸಿದರು.
ಎಕ್ಸಂಬಾ ಗ್ರಾಮದ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಈ ಚುನಾವಣೆಯಲ್ಲಿ ಒಂದು ಲಕ್ಷ ಮತಗಳಿಂದ ವಿಜಯಶಾಲಿಯಾಗುತ್ತೇನೆ. ಸಾಮಾಜಿಕ ಜಾಲತಾಣಗಳಲ್ಲಿ ನನ್ನ ವಿರೋಧಿಗಳು ಸುಳ್ಳು ಸುದ್ದಿಗಳನ್ನು ಎಡಿಟ್ ಮಾಡಿ ಹಾಕುತ್ತಿದ್ದಾರೆ. ಅವರು ಸೋಲುವ ಭಯದಲ್ಲಿ ಈ ರೀತಿಯಾಗಿ ಮಾಡುತ್ತಿದ್ದಾರೆ ಎಂದು ಹೇಳಿದರು.
ನಿಪ್ಪಾಣಿ ಶಾಸಕಿ ಶಸಿಕಲಾ ಜೊಲ್ಲೆ ಮಾಧ್ಯಮದವರ ಜೊತೆ ಮಾತನಾಡಿ, ಅಣ್ಣಾಸಾಹೇಬ ಜೊಲ್ಲೆ ಅವರ ಗೆಲವು ನೂರಕ್ಕೆ ನೂರು ಪ್ರತಿಶತ ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕೋಡಿಯಲ್ಲಿ ಬಿಜೆಪಿ ಗೆಲ್ಲುತ್ತದೆ: ಪ್ರಭಾಕರ ಕೋರೆ
ಮಂಬೈ ಕರ್ನಾಟಕದಲ್ಲಿ ಕಳೆದ ಚುನಾವಣೆಯಲ್ಲಿ ಏಳು ಕ್ಷೇತ್ರದಲ್ಲಿ ನಮ್ಮ ಚಿಕ್ಕೋಡಿ ಹೊರತುಪಡಿಸಿ ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದು, ಈ ಬಾರಿ ಏಳು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ನೀರಿಕ್ಷೆ ಇದೆ ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದರು.
ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಮರಾಠಿ ಹೆಣ್ಣು ಮಕ್ಕಳ ಶಾಲೆಯಲ್ಲಿ ಮತದಾನ ಮಾಡಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕೂಡ ಏಳು ಲೋಕಸಭಾ ಕ್ಷೇತ್ರಗಳಿದ್ದು, ಅಲ್ಲಿ ಆರು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದು ನಿಶ್ಚಿತ. ಮಲ್ಲಿಕಾರ್ಜುನ ಖರ್ಗೆ ಅವರು ಸೋಲುವುದು ನಿಶ್ಚಿತ ಎಂದು ಹೇಳಿದರು.
ದಿ. ಸಿ.ಎಸ್.ಶಿವಳ್ಳಿ ಪತ್ನಿ ಕುಸುಮಾ ಶಿವಳ್ಳಿಯಿಂದ ಮತದಾನ: