ಚಿಕ್ಕೋಡಿ(ಬೆಳಗಾವಿ):ಲಾಕ್‌ಡೌನ್ ವಿಚಾರವಾಗಿ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡುವ ವಿಚಾರವನ್ನು ಆಯಾ ಜಿಲ್ಲಾ ಉಸ್ತುವಾರಿ ಮತ್ತು ಜಿಲ್ಲಾಡಳಿತಕ್ಕೆ ಬಿಟ್ಟಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಲಾಕ್‌ಡೌನ್ ಬಗ್ಗೆ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ: ಎಸ್.ಟಿ.ಸೋಮಶೇಖರ್ ಸ್ಪಷ್ಟನೆ - ಯಕ್ಸಾಂಬ ಪಟ್ಟಣ
ಬೆಂಗಳೂರಿನಲ್ಲಿ ಪ್ರತಿದಿನ ಸಾವಿರಾರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿದೆ. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಒಂದು ವಾರ ಲಾಕ್‌ಡೌನ್ ಮಾಡಲಾಗಿದೆ. ಇನ್ನೂ ಜಿಲ್ಲೆಗಳ ಸಂಬಂಧ ಆಯಾ ಜಿಲ್ಲಾಧಿಕಾರಿ ಹಾಗೂ ಉಸ್ತುವಾರಿಗೆ ನೀಡಲಾಗಿದೆ ಎಂದಿದ್ದಾರೆ.
ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಆಶಾ ಕಾರ್ಯಕರ್ತರಿಗೆ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆ ಹಾಗೂ ಸಹಕಾರಿ ಇಲಾಖೆ ವತಿಯಿಂದ ಚೆಕ್ ವಿತರಣೆ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಪ್ರತಿದಿನ ಸಾವಿರಾರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿದೆ. ಜನರಿಗೆ ತೊಂದರೆಯಾಗುತ್ತಿದೆ ಎಂದು ಒಂದು ವಾರ ಲಾಕ್‌ಡೌನ್ ಮಾಡಲಾಗಿದೆ. ಬೆಂಗಳೂರು ಲಾಕ್‌ಡೌನ್ ಮಾಡುವುದರ ಬಗ್ಗೆ ಸಿಎಂ ನಿರ್ಣಯ ತೆಗೆದುಕೊಂಡಿದ್ದಾರೆ, ಸಿಎಂ ಯಡಿಯೂರಪ್ಪನವರು ಕೋವಿಡ್ ಸಂದರ್ಭದಲ್ಲಿ ಯುವಕರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಅಲ್ಲದೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ, ನಿದ್ರೆಯಿಲ್ಲದೆ ಮುಖ್ಯಮಂತ್ರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯವೈಖರಿ ಬಗ್ಗೆ ಯಾರೂ ಸಹ ಮಾತನಾಡಲು ಸಾಧ್ಯವಿಲ್ಲ ಎಂದು ಶ್ಲಾಘಿಸಿದರು.