ಅಥಣಿ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾಗಿವೆ. ಆದ್ರೆ ಅಥಣಿಯಲ್ಲಿ ಯಾವುದೇ ಬಂದ್ ಮಾಡುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ನಾಯಕ ಪ್ರಕಾಶ್ ಪೂಜೇರಿ 'ಈಟಿವಿ ಭಾರತ'ಕ್ಕೆ ದೂರವಾಣಿ ಮೂಲಕ ತಿಳಿಸಿದ್ದಾರೆ.
ಅಥಣಿಯಲ್ಲಿ ಪ್ರತಿಭಟನೆ ಕೈಬಿಟ್ಟ ರೈತರು - Karnataka state farmers association protest news
ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಹಾಗೂ ಅಥಣಿ ಪಟ್ಟಣದಲ್ಲಿ ಯಾವುದೇ ರೀತಿಯ ಪ್ರತಿಭಟನೆ ಮಾಡಬಾರದೆಂದು ರೈತ ಸಂಘಟನೆಗಳು ತೀರ್ಮಾನಿಸಿವೆ.

Athani
ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಹಾಗೂ ಅಥಣಿ ಪಟ್ಟಣದಲ್ಲಿ ಯಾವುದೇ ರೀತಿಯ ಪ್ರತಿಭಟನೆ ಮಾಡಬಾರದೆಂದು ರೈತ ಸಂಘಟನೆಗಳು ತೀರ್ಮಾನಿಸಿವೆ. ಮುಂಬರುವ ಸೋಮವಾರ ಪಟ್ಟಣದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಿಲುವು ಖಂಡಿಸಿ ಒಂದು ದಿನದ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.
ಇಂದು ಅಥಣಿ ತಾಲೂಕಿನಲ್ಲಿ ಯಾವುದೇ ರೀತಿಯ ಪ್ರತಿಭಟನೆಯಾಗಲಿ, ರಸ್ತೆ ಬಂದ್ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.